Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:5 - ಪರಿಶುದ್ದ ಬೈಬಲ್‌

5 ಹಿಂದಿನ ಕಾಲದಲ್ಲಿ, ನಮ್ಮ ಪಾಪಾಧೀನಸ್ವಭಾವವು ನಮ್ಮನ್ನು ಆಳುತ್ತಿತ್ತು. ಪಾಪಕೃತ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಧರ್ಮಶಾಸ್ತ್ರವು ನಮ್ಮಲ್ಲಿ ಉಂಟುಮಾಡಿತು. ಮತ್ತು ನಾವು ಮಾಡಲಿಚ್ಛಿಸಿದ್ದ ಆ ಪಾಪಕೃತ್ಯಗಳು ನಮ್ಮ ದೇಹಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡವು. ಇದರಿಂದಾಗಿ, ನಾವು ಮಾಡಿದ ಕಾರ್ಯಗಳೆಲ್ಲ ನಮಗೆ ಆತ್ಮಿಕ ಮರಣವನ್ನು ಮಾತ್ರ ಉಂಟು ಮಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾಚ್ ಸ್ವಬಾವಾಚ್ಯಾ ಸರ್ಕೆ ಚಲುನ್ಗೆತ್ ಹೊತ್ತಾಂವ್ ತನ್ನಾ ಖಾಯ್ದ್ಯಾಚ್ಯಾ ವೈನಾ ವೈರ್ ಉಟಲ್ಲ್ಯಾ ಪಾಪಾಕ್ ವೊಡ್ತಲ್ಯಾ ಗೊಸ್ಟಿಯಾ ಅಮ್ಚ್ಯಾ ಆಂಗಾತ್ನಿ ಗುಸುನ್ ಕಾಮ್ ಕರಿತ್; ಅನಿ ಹೆಚ್ಯಾ ವೈನಾಚ್ ಅಮಿ ಮರ್ನಾತ್ ಜಾವ್ನ್ ಪಾವಲ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:5
28 ತಿಳಿವುಗಳ ಹೋಲಿಕೆ  

ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


ನಿಮ್ಮ ದೇಹದ ಅಂಗಗಳನ್ನು ಪಾಪದ ಸೇವೆಗೆ ಒಪ್ಪಿಸಬೇಡಿ; ನಿಮ್ಮ ದೇಹಗಳನ್ನು ಪಾಪಕ್ಕೆ ಒಪ್ಪಿಸಿ ದುಷ್ಟತ್ವವನ್ನು ನಡೆಸುವ ಸಾಧನಗಳಾಗಬೇಡಿ. ಅದಕ್ಕೆ ಬದಲಾಗಿ, ನಿಮ್ಮನ್ನೇ ದೇವರಿಗೆ ಸಮರ್ಪಿಸಿಕೊಳ್ಳಿರಿ; ಸತ್ತು ಈಗ ಜೀವಂತವಾಗಿ ಎದ್ದುಬಂದಿರುವವರಂತೆ ಜೀವಿಸಿರಿ; ಒಳ್ಳೆಯ ಕಾರ್ಯಗಳನ್ನು ಮಾಡುವ ಸಾಧನಗಳನ್ನಾಗಿ ನಿಮ್ಮ ದೇಹದ ಅಂಗಗಳನ್ನು ದೇವರಿಗೆ ಸಮರ್ಪಿಸಿರಿ.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಪಾಪ ಮಾಡುವವನು ದೇವರ ಕಟ್ಟಳೆಗಳನ್ನು ಉಲ್ಲಂಘಿಸುವವನಾಗಿದ್ದಾನೆ. ಹೌದು, ಪಾಪಮಾಡುವುದಕ್ಕೂ ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ಜೀವಿಸುವುದಕ್ಕೂ ಯಾವ ವ್ಯತ್ಯಾಸವಿಲ್ಲ.


ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.


ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ.


ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಎಲ್ಲಿಂದ ಬರುತ್ತವೆಯೆಂಬುದು ನಿಮಗೆ ತಿಳಿದಿದೆಯೋ? ನಿಮ್ಮ ಸ್ವಾರ್ಥಪರ ಆಸೆಗಳಿಂದ ನಿಮ್ಮ ಹೋರಾಟಗಳು ಮತ್ತು ವಾದವಿವಾದಗಳು ಬರುತ್ತವೆ. ಅವು ನಿಮ್ಮ ಅಂತರಂಗದಲ್ಲಿ ಯುದ್ಧ ಮಾಡುತ್ತಿವೆ.


ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)


ಆದರೆ ನನ್ನ ದೇಹದಲ್ಲಿ ಮತ್ತೊಂದು ನಿಯಮ ಕೆಲಸ ಮಾಡುತ್ತಿರುವುದನ್ನು ನಾನು ಕಾಣುತ್ತೇನೆ. ನನ್ನ ಅಂತರಂಗ ಒಪ್ಪಿಕೊಳ್ಳುವ ನಿಯಮಕ್ಕೆ ವಿರುದ್ಧವಾಗಿ ಆ ನಿಯಮ ಹೋರಾಡುತ್ತದೆ. ನನ್ನ ದೇಹದಲ್ಲಿ ಕೆಲಸ ಮಾಡುತ್ತಿರುವ ಆ ಮತ್ತೊಂದು ನಿಯಮವೇ ಪಾಪದ ನಿಯಮವಾಗಿದೆ. ಆ ನಿಯಮವು ನನ್ನನ್ನು ತನ್ನ ಸೆರೆಯಾಳನ್ನಾಗಿ ಮಾಡುತ್ತದೆ.


ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಜನರಿಗೆ ತಿಳಿದಿರುವ ಉದಾಹರಣೆಯ ಮೂಲಕ ನಾನು ಇದನ್ನು ನಿಮಗೆ ವಿವರಿಸುತ್ತೇನೆ. ಹಿಂದಿನ ಕಾಲದಲ್ಲಿ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೂ ದುಷ್ಟತ್ವಕ್ಕೂ ಗುಲಾಮರನ್ನಾಗಿ ಒಪ್ಪಿಸಿಕೊಟ್ಟಿದ್ದಿರಿ. ನೀವು ದುಷ್ಟತ್ವಕ್ಕಾಗಿ ಮಾತ್ರ ಜೀವಿಸಿದಿರಿ. ಅದೇ ರೀತಿಯಲ್ಲಿ ಈಗ ನೀವು ನಿಮ್ಮ ದೇಹದ ಅಂಗಗಳನ್ನು ನೀತಿಗೆ ಗುಲಾಮರನ್ನಾಗಿ ಒಪ್ಪಿಸಿಕೊಡಬೇಕು. ಆಗ ನೀವು ದೇವರಿಗಾಗಿ ಮಾತ್ರ ಜೀವಿಸುತ್ತೀರಿ.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಅವರು ಆ ರೀತಿ ವರ್ತಿಸಿದ್ದರಿಂದಲೇ, ದೇವರು ಅವರನ್ನು ನಾಚಿಕೆಕರವಾದ ಕಾಮಾಭಿಲಾಷೆಗೆ ಬಿಟ್ಟುಕೊಟ್ಟನು. ಅವರ ಸ್ತ್ರೀಯರು ಪುರಷರೊಂದಿಗೆ ಪಡೆಯುತ್ತಿದ್ದ ಸಹಜವಾದ ಲೈಂಗಿಕ ಸಂಪರ್ಕವನ್ನು ನಿಲ್ಲಿಸಿ, ಸಲಿಂಗಕಾಮಿಗಳಾದರು.


ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು.


ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.


ನಾವು ಪ್ರಪಂಚದಲ್ಲಿ ಜೀವಿಸುತ್ತಿದ್ದೇವೆ. ಆದರೆ ಪ್ರಪಂಚದವರು ಹೊಡೆದಾಡುವ ರೀತಿಯಲ್ಲಿ ನಾವು ಹೊಡೆದಾಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು