Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:8 - ಪರಿಶುದ್ದ ಬೈಬಲ್‌

8 ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಅಚೇತನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಹ್ಯಾ ಖಾಯ್ದ್ಯಾಚ್ಯಾ ವೈನಾ ಪಾಪಾನ್ ಮಾಜ್ಯಾ ಭುತ್ತುರ್ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಆಶಾ ಉಟಿ ಸರ್ಕೆ ಕರ್‍ಲ್ಯಾನ್. ಖಾಯ್ದೊಚ್ ನಸ್ಲ್ಯಾರ್, ಪಾಪ್ ಎಕ್ ಮರಲ್ಲೆ ವಿಶಯ್ ಹೊವ್ನ್ ರ್‍ಹಾಯ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:8
12 ತಿಳಿವುಗಳ ಹೋಲಿಕೆ  

ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು.


ಕೇಡುಮಾಡಲು ಮರಣಕ್ಕಿರುವ ಶಕ್ತಿಯು ಪಾಪವೇ. ಪಾಪದ ಶಕ್ತಿಯು ಧರ್ಮಶಾಸ್ತ್ರವೇ.


ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.


ಹಾಗಾದರೆ, ಒಳ್ಳೆಯದೇ ನನಗೆ ಮರಣವನ್ನು ಬರಮಾಡಿತೆಂದರ್ಥವೇ? ಇಲ್ಲ! ಆದರೆ ಪಾಪವು ಒಳ್ಳೆಯದನ್ನೇ ಬಳಸಿಕೊಂಡು ನನಗೆ ಮರಣವನ್ನು ಬರಮಾಡಿತು. ಇದರಿಂದಾಗಿ, ನಾನು ಪಾಪದ ನಿಜಸ್ವರೂಪವನ್ನು ಕಾಣುವಂತಾಯಿತು. ಪಾಪವು ಬಹು ಕೆಟ್ಟದ್ದೆಂದು ಆಜ್ಞೆಯ ಮೂಲಕ ಸ್ಪಷ್ಟವಾಯಿತು.


ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.


ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.


ಹೀಗಿರಲಾಗಿ ಈ ಕೆಟ್ಟಕಾರ್ಯಗಳನ್ನು ಮಾಡುವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಈ ಕೆಟ್ಟಕಾರ್ಯಗಳನ್ನು ಮಾಡುತ್ತದೆ.


ಬೇರೆ ಯಾವ ವ್ಯಕ್ತಿಯೂ ಹಿಂದೆಂದೂ ಮಾಡಿಲ್ಲದ ಕಾರ್ಯಗಳನ್ನು ಮಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ನಾನು ಮಾಡಿದ ಆ ಕಾರ್ಯಗಳನ್ನು ಅವರು ನೋಡಿದ್ದಾರೆ. ಹೀಗಿದ್ದರೂ ಅವರು ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸುತ್ತಾರೆ.


ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ನಾನು ಧರ್ಮಶಾಸ್ತ್ರವನ್ನು ತಿಳಿದುಕೊಳ್ಳುವುದಕ್ಕಿಂತ ಮೊದಲು ಧರ್ಮಶಾಸ್ತ್ರವಿಲ್ಲದವನಾಗಿ ಜೀವಂತವಾಗಿದ್ದೆನು. ಆದರೆ ಧರ್ಮಶಾಸ್ತ್ರದ ಆಜ್ಞೆಯು ನನ್ನ ಬಳಿಗೆ ಬಂದಾಗ, ಪಾಪವು ಜೀವಿಸತೊಡಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು