ರೋಮಾಪುರದವರಿಗೆ 8:15 - ಪರಿಶುದ್ದ ಬೈಬಲ್15 ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಈ ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಕಶ್ಯಾಕ್ ಮಟ್ಲ್ಯಾರ್ ಜೊ ಆತ್ಮೊ ದೆವಾನ್ ತುಮ್ಕಾ ದಿಲ್ಯಾನಾಯ್ ತೊ ತುಮ್ಕಾ ಗುಲಾಮ್ ಕರುಕ್ ನಾಹೊಲ್ಯಾರ್ ಭಿಂವ್ಕ್ ಕಾರನ್ ಹೊಯ್ನಾ; ಹೆಚ್ಯಾ ಬದ್ಲಾಕ್, ತೊ ಆತ್ಮೊ ತುಮ್ಕಾ ದೆವಾಚಿ ಪೊರಾ ಕರ್‍ತಾ, ಅನಿ ತ್ಯಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್, ಅಮಿ ದೆವಾಕ್ “ಬಾಬಾ! ಮಾಜ್ಯಾ ಬಾಬಾ!” ಮನುನ್ ಬಲ್ವುತಾಂವ್. ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
ಯೇಸುವಿನ ಬಗ್ಗೆ ನಾವು ಬೋಧಿಸಿದ ಸಂಗತಿಗಳಿಗೆ ಭಿನ್ನವಾದಂಥ ಸಂಗತಿಗಳನ್ನು ಬೋಧಿಸುವ ಬೋಧಕರು ನಿಮ್ಮ ಬಳಿಗೆ ಬಂದು ಬೋಧಿಸಿದರೂ ನೀವು ತಾಳ್ಮೆಯಿಂದಿರುತ್ತೀರಿ. ನೀವು ನಮ್ಮಿಂದ ಸ್ವೀಕರಿಸಿಕೊಂಡ ಪವಿತ್ರಾತ್ಮನಿಗೂ ಸುವಾರ್ತೆಗೂ ಭಿನ್ನವಾದ ಆತ್ಮವನ್ನೂ ಸುವಾರ್ತೆಯನ್ನೂ ಸ್ವೀಕರಿಸಿಕೊಳ್ಳಲು ಬಹು ಇಷ್ಟವುಳ್ಳವರಾಗಿದ್ದೀರಿ. ಆದ್ದರಿಂದ ನೀವು ನಮ್ಮ ವಿಷಯದಲ್ಲಿ ತಾಳ್ಮೆಯಿಂದಿರಬೇಕು.