Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:16 - ಪರಿಶುದ್ದ ಬೈಬಲ್‌

16 ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ದೆವಾಚೊ ಆತ್ಮೊ ಅಮ್ಚ್ಯಾ ಅತ್ಮ್ಯಾಂಚ್ಯಾ ವಾಂಗ್ಡಾ ಮಿಳ್ತಾ ಅನಿ ಅಮಿ ದೆವಾಚಿ ಪೊರಾಚ್ ಮನುನ್ ಸಾಕ್ಷಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:16
27 ತಿಳಿವುಗಳ ಹೋಲಿಕೆ  

ನಾವು ದೇವರಲ್ಲಿ ನೆಲೆಸಿದ್ದೇವೆ ಮತ್ತು ದೇವರು ನಮ್ಮಲ್ಲಿ ನೆಲೆಸಿದ್ದಾನೆ ಎಂಬುದು ನಮಗೆ ತಿಳಿದದೆ. ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದ ಇದು ನಮಗೆ ತಿಳಿದಿದೆ.


ನಾವು ಆತನವರೆಂಬುದನ್ನು ತೋರಿಸುವುದಕ್ಕಾಗಿ ಆತನು ನಮ್ಮ ಮೇಲೆ ಮುದ್ರೆಯನ್ನು ಹಾಕಿದ್ದಾನೆ. ಆತನು ತನ್ನ ಪವಿತ್ರಾತ್ಮನನ್ನು ನಮ್ಮ ಹೃದಯಗಳಲ್ಲಿ ನೆಲೆಗೊಳಿಸಿದ್ದಾನೆ. ಆತನು ನಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಪವಿತ್ರಾತ್ಮನೇ ನಮಗೆ ಆಧಾರವಾಗಿದ್ದಾನೆ.


ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.


ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.


ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.


ಪವಿತ್ರಾತ್ಮನನ್ನು ದುಃಖಪಡಿಸಬೇಡಿ. ನೀವು ದೇವರಿಗೆ ಸೇರಿದವರೆಂಬುದಕ್ಕೆ ಆತನೇ ದೇವರ ಪ್ರಮಾಣವಾಗಿದ್ದಾನೆ. ಸೂಕ್ತ ಸಮಯದಲ್ಲಿ ನಿಮ್ಮನ್ನು ಬಿಡುಗಡೆ ಮಾಡುತ್ತೇನೆ ಎಂಬುದನ್ನು ತೋರಿಸುವುದಕ್ಕಾಗಿಯೇ ದೇವರು ನಿಮಗೆ ಆತನನ್ನು ಕೊಟ್ಟನು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.


ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.


“ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು.


ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.


ಯಾರ್ಯಾರು ಆತನನ್ನು ಸ್ವೀಕರಿಸಿಕೊಂಡರೋ ಅಂದರೆ ಆತನಲ್ಲಿ ನಂಬಿಕೆ ಇಟ್ಟರೋ ಅವರಿಗೆ ಆತನು ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು.


ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.


ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.


ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ.


ಮತ್ತು “ಯಾವ ಸ್ಥಳದಲ್ಲಿ ದೇವರು, ‘ನೀವು ನನ್ನ ಜನರಲ್ಲ’ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.”


“ನಾನು ನಿಮ್ಮ ತಂದೆಯಾಗಿರುವೆನು ಮತ್ತು ನೀವು ನನ್ನ ಪುತ್ರಪುತ್ರಿಯರಾಗುವಿರಿ ಎನ್ನುತ್ತಾನೆ ಸರ್ವಶಕ್ತನಾದ ಪ್ರಭುವು.”


ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ.


ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ.


ತಂದೆಯು ನಮ್ಮನ್ನು ಬಹಳವಾಗಿ ಪ್ರೀತಿಸಿದನು! ದೇವರ ಮಕ್ಕಳು ಎಂಬ ಹೆಸರನ್ನು ನಮಗೆ ಕೊಡುವಷ್ಟರ ಮಟ್ಟಿಗೆ ದೇವರು ನಮ್ಮನ್ನು ಪ್ರೀತಿಸಿದನು. ನಾವು ನಿಜವಾಗಿಯೂ ದೇವರ ಮಕ್ಕಳಾಗಿದ್ದೇವೆ. ಆದರೆ ಲೋಕದಲ್ಲಿರುವ ಜನರಾದರೋ ನಾವು ದೇವರ ಮಕ್ಕಳೆಂಬುದನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವರು ದೇವರನ್ನು ತಿಳಿದಿಲ್ಲ.


ಪ್ರಿಯ ಸ್ನೇಹಿತರೇ, ಈಗ ನಾವು ದೇವರ ಮಕ್ಕಳಾಗಿದ್ದೇವೆ. ನಾವು ಮುಂದೆ ಏನಾಗುವೆವೆಂಬುದನ್ನು ನಮಗಿನ್ನೂ ತೋರ್ಪಡಿಸಿಲ್ಲ. ಆದರೆ ಕ್ರಿಸ್ತನು ಮರಳಿ ಬಂದಾಗ ಅದನ್ನು ತಿಳಿದುಕೊಳ್ಳುತ್ತೇವೆ. ನಾವು ಆತನಂತಾಗುವೆವು. ನಾವು ಆತನ ನಿಜಸ್ವರೂಪವನ್ನೇ ನೋಡುವೆವು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದನ್ನೂ ಸೈತಾನನ ಮಕ್ಕಳು ಯಾರೆಂಬುದನ್ನೂ ನಾವು ತಿಳಿದುಕೊಳ್ಳಬಹುದು. ಯೋಗ್ಯವಾದುದನ್ನು ಮಾಡದಿರುವ ಜನರು ದೇವರ ಮಕ್ಕಳಲ್ಲ. ತನ್ನ ಸಹೋದರನನ್ನು ಪ್ರೀತಿಸದಿರುವವನು ದೇವರ ಮಗನಲ್ಲ.


ಜಯಗಳಿಸುವವನು ಇದೆಲ್ಲವನ್ನು ಪಡೆಯುತ್ತಾನೆ. ನಾನು ಅವನ ದೇವರಾಗಿರುತ್ತೇನೆ, ಅವನು ನನ್ನ ಮಗನಾಗಿರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು