Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:20 - ಪರಿಶುದ್ದ ಬೈಬಲ್‌

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಗ್ಳ್ಯಾ ರಚ್ನಾನ್ ಅಪ್ನಾಚೊ ಉದ್ದೆಸ್ ಪುರಾ ಕರುಕ್ ನಾ ಮಟ್ಲ್ಯಾರ್, ತೆ ತಿಚ್ಯಾ ಸ್ವತಾಚ್ಯಾ ಮನಾನ್ ನ್ಹಯ್, ತಿಕಾ ಖಾಲ್ತಿ ಕರಲ್ಲ್ಯಾ ದೆವಾಚ್ಯಾ ಮರ್ಜಿ ಸರ್ಕೆ ತೆ ಹೊಲಾ. ಅಜುನ್ ಜಾಲ್ಯಾರ್‍ಬಿ ತಿಕಾ ಬರೊಸೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:20
14 ತಿಳಿವುಗಳ ಹೋಲಿಕೆ  

ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.


ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.


ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.


ಹೀಗೆ ದೇಶವು ಸತ್ತವರಿಗಾಗಿ ಗೋಳಾಡುವ ಮನುಷ್ಯನಂತಿರುವದು. ಆದ್ದರಿಂದ ಅದರ ಜನರೆಲ್ಲಾ ಬಲಹೀನರಾಗತ್ತಾರೆ. ಅಡವಿಯಲ್ಲಿರುವ ಪ್ರಾಣಿಗಳೂ ಆಕಾಶದ ಪಕ್ಷಿಗಳೂ ಸಮುದ್ರದಲ್ಲಿರುವ ಮೀನುಗಳೂ ಸಾಯುತ್ತಿವೆ.


ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.


ಪ್ರಾಣಿಗಳು ಹಸಿವಿನಿಂದ ನರಳಾಡುತ್ತಿವೆ. ಪ್ರಾಣಿಗಳ ಹಿಂಡು ಗಲಿಬಿಲಿಗೊಂಡು ಅಡ್ಡಾಡುತ್ತವೆ. ಅವುಗಳಿಗೆ ತಿನ್ನಲು ಹುಲ್ಲು ಇಲ್ಲ. ಕುರಿಗಳು ಸಾಯುತ್ತಿವೆ.


ಹೌದು, ಮರಳುಭೂಮಿಯನ್ನಾಗಿ ಮಾಡಿದ್ದಾರೆ. ಅದು ಒಣಗಿಹೋಗಿ ನಿಸ್ಸತ್ವವಾಗಿದೆ. ಅಲ್ಲಿ ಯಾರೂ ವಾಸಿಸುವದಿಲ್ಲ. ಇಡೀ ದೇಶವೇ ಬರಿದಾದ ಮರಳುಗಾಡಾಗಿದೆ. ಆ ತೋಟವನ್ನು ನೋಡಿಕೊಳ್ಳುವದಕ್ಕೆ ಯಾರೂ ಉಳಿದಿಲ್ಲ.


ನೀನು ನನಗೆ ಕೇವಲ ಅಲ್ಪಾಯುಷ್ಯವನ್ನು ಕೊಟ್ಟಿರುವೆ. ನನ್ನ ಅಲ್ಪ ಜೀವಿತವು ನಿನ್ನ ದೃಷ್ಟಿಯಲ್ಲಿ ಗಣನೆಗೂ ಬಾರದು. ಮನುಷ್ಯನ ಜೀವಿತವು ಕೇವಲ ಮೋಡದಂತೆ ಕ್ಷಣಿಕವಾಗಿದೆ. ಯಾವನೂ ಸದಾಕಾಲ ಬದುಕುವುದಿಲ್ಲ!


ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು