ರೋಮಾಪುರದವರಿಗೆ 8:26 - ಪರಿಶುದ್ದ ಬೈಬಲ್26 ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆಚ್ ಪವಿತ್ರ್ ಆತ್ಮೊಬಿ ಅಮ್ಚೊ ಬರೊಸ್ಯಾಚೊ ಬಳ್ ಕಮಿ ಹೊಲ್ಲ್ಯಾ ತನ್ನಾ ಅಮ್ಕಾ ಮಜತ್ ಕರುಕ್ ಯೆತಾ. ಕಶ್ಯಾಕ್ ಮಟ್ಲ್ಯಾರ್ ಕಾಯ್ ಅನಿ ಕಶೆ ಮಾಗ್ನಿ ಕರ್‍ತಲೆ ಮನುನ್ ಅಮ್ಕಾ ಗೊತ್ತ್ ನಾ, ತಸೆಚ್ ಪವಿತ್ರ್ ಆತ್ಮೊಚ್ ಅಮ್ಚ್ಯಾನ್ ಸಾಂಗುಕ್ ಹೊಯ್ ನಸಲ್ಲ್ಯಾ ಗೊಸ್ಟಿಯಾನಿ ಅಪ್ನಾಚ್ಯಾ ಉಸ್ಕಾರಾನಿ ಮಾಗುನ್ಗೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |