Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:3 - ಪರಿಶುದ್ದ ಬೈಬಲ್‌

3 ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖಾಯ್ದ್ಯಾಕ್ ಜೆ ಕಾಯ್ ಕರುಕ್ ಹೊವ್ಕ್ ನಾ, ತೆ ದೆವಾನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್ ಅಮ್ಚ್ಯಾ ಮಾನ್ಸಾಚ್ಯಾ ಸ್ವಬಾವಾಕ್ ಬಳ್ ಕಮಿ. ತೆನಿ ಅಪ್ನಾಚ್ಯಾ ಸ್ವತಾಚ್ಯಾ ಲೆಕಾಕ್ ಮಾನ್ಸಾಚ್ಯಾ ರುಪಾತ್ ಧಾಡುನ್ ದಿಲ್ಲ್ಯಾ ವೈನಾ ಪಾಪ್ ಚುಕಿದಾರ್ ಮನುನ್ ದಾಕ್ವುನ್ ದಿಲ್ಯಾನ್, ಪಾಪಾಕ್ ಧುರ್ ಕಾಡುನ್ ಟಾಕುಕ್ ತೊ ಅಮ್ಚೊ ಪಾಪಿ ಲೊಕಾಂಚೊ ಸ್ವಬಾವ್ ಘೆವ್ನ್ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:3
28 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.


ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರೋಧವಾಗಿದೆ ಎಂಬುದು ಇದರರ್ಥವೇ? ಇಲ್ಲ! ಜೀವವನ್ನು ಕೊಡುವಂಥ ಧರ್ಮಶಾಸ್ತ್ರವಿದ್ದಿದ್ದರೆ ಅದನ್ನು ಅನುಸರಿಸುವುದರ ಮೂಲಕ ನೀತಿವಂತರಾಗಬಹುದಾಗಿತ್ತು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.


ಆ ಮಕ್ಕಳು ಭೌತಿಕ ಶರೀರ ಹೊಂದಿದ್ದರು. ಆದ್ದರಿಂದ ಯೇಸು ತಾನೇ ಅವರಂತಾದನು. ಆತನು ತನ್ನ ಸಾವಿನ ಮೂಲಕ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಗೊಳಿಸಿ,


ಆ ಪದವಿಯನ್ನು ಆತನು ಬಿಟ್ಟುಕೊಟ್ಟು ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು.


ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.


ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.


ಇದಲ್ಲದೆ ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಒಂದು ಹೋತವನ್ನು ಪಾಪಪರಿಹಾರಕ ಯಜ್ಞವಾಗಿ ಅರ್ಪಿಸಬೇಕು.


ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.


ಆದ್ದರಿಂದ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಕಚ್ಚಿಸಿಕೊಂಡಿದ್ದವನು ಆ ತಾಮ್ರದ ಸರ್ಪವನ್ನು ನೋಡಿ ಬದುಕಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು