Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:30 - ಪರಿಶುದ್ದ ಬೈಬಲ್‌

30 ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ಜೆ ಕೊನಾಕ್ ತೆನಿ ಯೆಗಳ್ಯಾನಾಯ್ ತೆಂಕಾ ತೆನಿ ಬಲ್ವುಲ್ಯಾನಾಯ್, ಅನಿ ಜೆ ಕೊನಾಕ್ ತೆನಿ ಬಲ್ವುಲ್ಯಾನಾಯ್ ತೆಂಕಾ ತೊ ನಿತಿವಂತ್ ಮನುನ್ ಎಚುನ್ ಕಾಡುನ್ ಘೆತಾ, ಅನಿ ತೆನಿ ಅಪ್ನಾಚಿ ಮಹಿಮಾ ತೆಂಚ್ಯಾ ವಾಂಗ್ಡಾ ವಾಟುನ್ ಘೆಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:30
42 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.


ನಾವು ದೇವರ ಮಕ್ಕಳಾಗಿರಬೇಕೆಂದು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಳ್ಳಲಾಯಿತು. ನಾವು ತನ್ನ ಮಕ್ಕಳಾಗಿರಬೇಕೆಂದು ದೇವರು ತನ್ನ ಚಿತ್ತಾನುಸಾರವಾಗಿ ಮೊದಲೇ ಯೋಜನೆ ಮಾಡಿದ್ದನು. ತನ್ನ ನಿರ್ಧಾರ ಮತ್ತು ಇಷ್ಟಗಳಿಗನುಸಾರವಾಗಿ ಪ್ರತಿಯೊಂದನ್ನು ನೆರವೇರಿಸುವಾತನು ದೇವರೇ.


ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.


ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.


ಅಪಕಾರ ಮಾಡಿದವನಿಗೆ ಅಪಕಾರ ಮಾಡದೆ, ನಿಂದಿಸಿದವನನ್ನು ನಿಂದಿಸದೆ, ಅವನನ್ನು ಆಶೀರ್ವದಿಸುವಂತೆ ದೇವರಲ್ಲಿ ಬೇಡಿಕೊಳ್ಳಿರಿ. ಏಕೆಂದರೆ ಆಶೀರ್ವಾದವನ್ನು ಹೊಂದಿಕೊಳ್ಳಲು ನೀವು ಕರೆಯಲ್ಪಟ್ಟವರಾಗಿದ್ದೀರಿ.


ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.


ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.


ದೇವರು ನಂಬಿಗಸ್ತನಾಗಿದ್ದಾನೆ. ದೇವರ ಮಗನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಜೀವದಲ್ಲಿ ಪಾಲುಹೊಂದಬೇಕೆಂದು ನಮ್ಮನ್ನು ಕರೆದಿರುವಾತನು ದೇವರೇ.


ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.


ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.


ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.


ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು.


“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.


ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.


ಹೌದು, ನೀವು ಸ್ವಲ್ಪಕಾಲ ಮಾತ್ರ ಸಂಕಟವನ್ನು ಅನುಭವಿಸುವಿರಿ. ಆದರೆ ಅನಂತರ ದೇವರು ಎಲ್ಲವನ್ನು ಸರಿಪಡಿಸುತ್ತಾನೆ. ಆತನು ನಿಮ್ಮನ್ನು ಬಲಪಡಿಸುತ್ತಾನೆ. ನೀವು ಕೆಳಕ್ಕೆ ಬೀಳದಂತೆ ಆತನು ನಿಮಗೆ ಆಧಾರವಾಗುವನು. ಎಲ್ಲರಿಗೂ ಕೃಪೆಯನ್ನು ತೋರುವ ದೇವರು ಆತನೇ. ತನ್ನ ಪ್ರಭಾವದಲ್ಲಿ ಪಾಲುಗಾರರಾಗಲು ಕ್ರಿಸ್ತನೇ ನಿಮ್ಮನ್ನು ಕರೆದನು. ಆ ಪ್ರಭಾವವು ಶಾಶ್ವತವಾದದ್ದು.


ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.


ದೇಹವು ಒಂದೇ ಮತ್ತು ಆತ್ಮನು ಒಬ್ಬನೇ. ನೀವೆಲ್ಲರೂ ಒಂದೇ ನಿರೀಕ್ಷೆಯನ್ನು ಹೊಂದಿರಬೇಕೆಂದು ದೇವರು ನಿಮ್ಮನ್ನು ಕರೆದನು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.


ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ರೋಮಿನಲ್ಲಿರುವ ನೀವು ಸಹ ಯೇಸು ಕ್ರಿಸ್ತನವರಾಗುವುದಕ್ಕಾಗಿ ಕರೆಯಲ್ಪಟ್ಟಿದ್ದೀರಿ.


ಸರ್ವಸೃಷ್ಟಿಯು ನಾಶನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಸ್ವಾತಂತ್ರವನ್ನೂ ಮಹಿಮೆಯನ್ನೂ ಹೊಂದಿಕೊಳ್ಳುತ್ತದೆ ಎಂಬುದೇ.


ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.


ನಾವಾದರೋ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.


ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.


ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.


ಆ ಒತ್ತಾಯವು ಬಂದದ್ದು ನಿಮ್ಮನ್ನು ಆರಿಸಿಕೊಂಡಾತನಿಂದಲ್ಲ.


ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು