Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:33 - ಪರಿಶುದ್ದ ಬೈಬಲ್‌

33 ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33-34 ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್‍ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್‍ ಮನುನ್ ನಿರ್‍ನಯ್ ದಿವ್ನ್ ಸೊಡ್ಲ್ಯಾನಾಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:33
19 ತಿಳಿವುಗಳ ಹೋಲಿಕೆ  

“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.


ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಅಪರಾಧಿಗಳೆಂದು ತೀರ್ಪಾಗುವುದಿಲ್ಲ.


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ.


“ನನ್ನ ಸೇವಕನನ್ನು ನೋಡಿರಿ! ನಾನು ಆತನಿಗೆ ಬೆಂಬಲ ನೀಡುತ್ತೇನೆ. ನಾನು ಆರಿಸಿಕೊಂಡಿದ್ದು ಆತನನ್ನೇ. ನಾನು ಆತನನ್ನು ಮೆಚ್ಚಿಕೊಂಡಿದ್ದೇನೆ. ನನ್ನ ಆತ್ಮವನ್ನು ಆತನಲ್ಲಿರಿಸುವೆನು. ಆತನು ಜನಾಂಗಗಳನ್ನು ನ್ಯಾಯವಾಗಿ ತೀರ್ಪು ಮಾಡುವನು.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.


ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.


ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು.


ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು