ರೋಮಾಪುರದವರಿಗೆ 8:34 - ಪರಿಶುದ್ದ ಬೈಬಲ್34 ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಅಶೆ ಹೊಲ್ಯಾರ್ ತೆನಿ ಚುಕಿದಾರ್ ಮನುನ್ ಸಾಂಗ್ತಲೊ ಕೊನ್ ತೊ? ಕ್ರಿಸ್ತ್ ಜೆಜು ಮರ್‍ಲೊ, ತೊ ಝಿತ್ತೊ ಹೊಲಾ, ಅನಿ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲಾ ಅನಿ ಅಮ್ಚ್ಯಾಸಾಟ್ನಿ ದೆವಾಕ್ಡೆ ಮಾಗುಲಾ! ಅಧ್ಯಾಯವನ್ನು ನೋಡಿ |
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.