Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:35 - ಪರಿಶುದ್ದ ಬೈಬಲ್‌

35 ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಅನ್ನವಿಲ್ಲದಿರುವದೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತಸೆ ಹೊಲ್ಯಾರ್ ಅಮ್ಕಾ ಕ್ರಿಸ್ತಾಚ್ಯಾ ಪ್ರೆಮಾತ್ನಾ ಎಗ್ಳುಕ್ ಕೊನಾಚ್ಯಾನ್ ಹೊತಾ? ಕಸ್ಟಾನ್‍, ನಾಹೊಲ್ಯಾರ್ ಅಡ್ಚನಿನ್, ನಾಹೊಲ್ಯಾರ್ ತರಾಸಾನ್, ನಾಹೊಲ್ಯಾರ್ ಭುಕೆನ್, ನಾಹೊಲ್ಯಾರ್ ಕಪ್ಡೆ ನಸಲ್ಲಿ ಪರಿಸ್ಥಿತಿನ್ ನಾಹೊಲ್ಯಾರ್ ಅಪಾಯಾನ್ ನಾ ಹೊಲ್ಯಾರ್ ಮರ್ನಾನ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:35
35 ತಿಳಿವುಗಳ ಹೋಲಿಕೆ  

ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.


ಆದರೆ ಯೆಹೋವನು ತನ್ನ ಭಕ್ತರನ್ನು ಪ್ರೀತಿಸುತ್ತಲೇ ಬಂದನು. ಇನ್ನು ಮುಂದೆಯೂ ಪ್ರೀತಿಸುತ್ತಲೇ ಇರುವನು. ಆತನು ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಒಳ್ಳೆಯವನಾಗಿರುವನು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.


ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.


ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೋ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.


ನೀವು ಹೇಳುವ ಒಳ್ಳೆಯ ಸಂಗತಿಗಳಲ್ಲಿ ಮತ್ತು ಮಾಡುವ ಒಳ್ಳೆಯ ಕಾರ್ಯಗಳಲ್ಲಿ ನಿಮಗೆ ಬಲವನ್ನೂ ಆದರಣೆಯನ್ನೂ ಪ್ರಭುವಾದ ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು ನಿಮಗೆ ದಯಪಾಲಿಸಲಿ ಎಂದು ನಾವು ಪ್ರಾರ್ಥಿಸುತ್ತೇವೆ. ದೇವರು ನಮ್ಮನ್ನು ಪ್ರೀತಿಸಿದನು. ಆತನು ತನ್ನ ಕೃಪೆಯಿಂದಲೇ ನಮಗೆ ಒಳ್ಳೆಯ ನಿರೀಕ್ಷೆಯನ್ನೂ ಶಾಶ್ವತವಾದ ಆದರಣೆಯನ್ನೂ ದಯಪಾಲಿಸಿದನು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.


ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ.


ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.


ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.


ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.


ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.


ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.


ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು