ರೋಮಾಪುರದವರಿಗೆ 8:7 - ಪರಿಶುದ್ದ ಬೈಬಲ್7 ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಆಂಗಾಚಿ ಮಟ್ಲ್ಯಾರ್ ಮಾನುಸ್‍ಪಾನಾಚಿ ಆಶಾ ದೆವಾಕ್ ವಿರೊದ್ ರ್‍ಹಾತಾ, ದೆವಾಚ್ಯಾ ಖಾಯ್ದ್ಯಾಕ್ ಹೆ ಆಂಗ್ ಖಾಲ್ತಿ ಹೊವ್ನ್ ಚಲಿನಾ ಅನಿ ಖಾಲ್ತಿ ಹೊವ್ನ್ ಚಲುಕ್ ಮಾನ್ಸಾಚ್ಯಾ ಸ್ವಬಾವಾಕ್ ಹೊಯ್ಚನಾ. ಅಧ್ಯಾಯವನ್ನು ನೋಡಿ |
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.