Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:1 - ಪರಿಶುದ್ದ ಬೈಬಲ್‌

1 ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಖರೆ ಬೊಲುಲಾ; ಮಿಯಾ ಕ್ರಿಸ್ತಾಕ್ ಸಮಂದ್ ಪಡಲ್ಲೊ ಹಾಂವ್ ಮಿಯಾ ಝುಟೆ ಬೊಲಿನಾ. ಮಾಜೊ ಭುತ್ತುರ್‍ಲೊ ಮನ್ ಪವಿತ್ರ್ ಆತ್ಮ್ಯಾಚ್ಯಾ ತಾಬೆತ್ ಹಾಯ್, ಅನಿ ತೊಚ್ ಮಿಯಾ ಝುಟೆ ಬೊಲಿನಾ ಹೊಲಾ ಮನುನ್ ಸಾಕ್ಷಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:1
16 ತಿಳಿವುಗಳ ಹೋಲಿಕೆ  

ಆದ ಕಾರಣವೇ ಸುವಾರ್ತೆಯನ್ನು ಸಾರುವುದಕ್ಕಾಗಿಯೂ ಅಪೊಸ್ತಲನಾಗುವುದಕ್ಕಾಗಿಯೂ ಯೆಹೂದ್ಯರಲ್ಲದ ಜನರಿಗೆ ಬೋಧಿಸುವುದಕ್ಕಾಗಿಯೂ ನನ್ನನ್ನು ಆರಿಸಿಕೊಳ್ಳಲಾಯಿತು. (ಇದು ಸತ್ಯ, ಖಂಡಿತವಾಗಿಯೂ ಸುಳ್ಳಲ್ಲ.) ಸತ್ಯವನ್ನು ತಿಳಿದುಕೊಳ್ಳಬೇಕೆಂತಲೂ ನಂಬಬೇಕೆಂತಲೂ ನಾನು ಅವರಿಗೆ ಬೋಧಿಸುತ್ತೇನೆ.


ನಾನು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಖಂಡಿತವಾಗಿ ಜ್ಞಾಪಿಸಿಕೊಳ್ಳುತ್ತೇನೆ. ಇದು ಸತ್ಯವೆಂದು ದೇವರಿಗೆ ಗೊತ್ತಿದೆ. ದೇವರ ಮಗನ ವಿಷಯವಾದ ಸುವಾರ್ತೆಯನ್ನು ಜನರಿಗೆ ಸಾರುವುದರ ಮೂಲಕ ನಾನು ದೇವರನ್ನು ನನ್ನ ಆತ್ಮದಲ್ಲಿ ಆರಾಧಿಸುವವನಾಗಿದ್ದೇನೆ. ದೇವರ ಚಿತ್ತದಿಂದ, ನಿಮ್ಮ ಬಳಿಗೆ ಬರಲು ಅವಕಾಶವಾಗಬೇಕೆಂದು ಪ್ರಾರ್ಥಿಸುತ್ತೇನೆ.


ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ.


ನಾನು ನಿಮ್ಮನ್ನು ನೋಡಲು ಬಹು ತವಕಪಡುತ್ತಿದ್ದೇನೆಂಬುದು ದೇವರಿಗೆ ಗೊತ್ತಿದೆ. ಯೇಸು ಕ್ರಿಸ್ತನಿಂದ ತೋರಿಬಂದ ಪ್ರೀತಿಯಿಂದ ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ.


ಈ ವಿಷಯದಲ್ಲಿ ನಾನು ಹೆಮ್ಮೆಪಡುವುದನ್ನು ಅಖಾಯದಲ್ಲಿರುವ ಯಾರೂ ನಿಲ್ಲಿಸಲಾರರು. ಕ್ರಿಸ್ತನ ಸತ್ಯವು ನನ್ನೊಳಗಿರುವುದರಿಂದ ಇದನ್ನು ಹೇಳುತ್ತಿದ್ದೇನೆ.


ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.


ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.


ನಿಮ್ಮ ಬಗ್ಗೆ ಒಳ್ಳೆಯದನ್ನು ಹೇಳಿ ನಿಮ್ಮನ್ನು ಮರುಳು ಮಾಡಬೇಕೆಂದು ನಾವೆಂದೂ ಪ್ರಯತ್ನಿಸಿಲ್ಲವೆಂಬುದು ನಿಮಗೆ ತಿಳಿದಿದೆ. ನಾವು ನಿಮ್ಮ ಹಣವನ್ನು ಕಸಿದುಕೊಳ್ಳಲು ಪ್ರಯತ್ನಿಸಿಲ್ಲ; ನಮ್ಮ ಸ್ವಾರ್ಥವನ್ನು ಮರೆಮಾಡಿಕೊಂಡು ವೇಶಧಾರಿಗಳಾಗಿರಲಿಲ್ಲ. ಇದು ನಿಜವೆಂಬುದು ದೇವರಿಗೆ ತಿಳಿದಿದೆ.


ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.


ನಾನು ಸುಳ್ಳು ಹೇಳುತ್ತಿಲ್ಲವೆಂದು ದೇವರಿಗೆ ಗೊತ್ತಿದೆ. ಆತನು ಪ್ರಭು ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿದ್ದಾನೆ. ಆತನಿಗೆ ಸದಾಕಾಲ ಸ್ತೋತ್ರ ಸಲ್ಲಿಸಬೇಕು.


ನಿಮ್ಮನ್ನು ಶಿಕ್ಷಿಸುವುದಕ್ಕಾಗಲಿ ನೋಯಿಸುವುದಕ್ಕಾಗಲಿ ನನಗೆ ಇಷ್ಟವಿರಲಿಲ್ಲ. ಆದಕಾರಣ ನಾನು ನಿಮ್ಮ ಬಳಿಗೆ ಹಿಂತಿರುಗಿ ಬರಲಿಲ್ಲ. ಇದು ಸತ್ಯ. ಇದಕ್ಕೆ ದೇವರೇ ಸಾಕ್ಷಿ.


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು