ರೋಮಾಪುರದವರಿಗೆ 9:21 - ಪರಿಶುದ್ದ ಬೈಬಲ್21 ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮುದ್ದೆಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಗಾಡ್ಗಿ ಕರ್‍ತಲ್ಯಾ ಕುಂಬಾರಾಕ್ ತೆನಿ ಕರ್‍ತಲೆ ಗಾಡ್ಗೆ ಅಪ್ನಾಚ್ಯಾ ಮನಾಕ್ ಯೆತಾ ತಸೆ ಕರ್‍ತಲೊ ಹಕ್ಕ್ ಹಾಯ್, ಅನಿ ದೊನ್ ಗಾಡ್ಗಿ ಎಕುಚ್ ಚಿಕ್ಲಾಚ್ಯಾ ಮುದ್ದ್ಯಾನ್, ಎಕ್ ಬರ್‍ಯಾ ಕಾಮಾಕ್ ವಾಪರ್ತಲೆ, ಅನಿ ಅನಿಎಕ್ ಸಾದಾರನ್ ಕಾಮಾಕ್ ವಾಪರ್ತಲೆ ಅಶೆ ದೊನ್ ಗಾಡ್ಗಿ ಕರ್‍ತಲೊಬಿ ಹಕ್ಕ್ ಹಾಯ್. ಅಧ್ಯಾಯವನ್ನು ನೋಡಿ |
ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.