Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:22 - ಪರಿಶುದ್ದ ಬೈಬಲ್‌

22 ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ಕರಲ್ಲೆಬಿ ಅಸೆಚ್ ಹಾಯ್. ತೆಕಾ ಅಪ್ನಾಚೊ ರಾಗ್ ದಾಕ್ವುನ್ ಅಪ್ನಾಚೊ ಬಳ್ ಸಗ್ಳ್ಯಾಕ್ನಿ ಕಳಿ ಸರ್ಕೆ ಕರುಚೆ ಮನುನ್ ಹೊತ್ತೆ. ಖರೆ ತೆನಿ ಜೆ ಕೊನ್ ತೆಚ್ಯಾ ರಾಗಾತ್ ಗಾವುನ್ ಫುಟುನ್ ಜಾತಲ್ಯಾ ಆಯ್ದಾನಾಚ್ಯಾ ಸರ್ಕೆ ಹೊತ್ತ್ಯಾ ಮಾನ್ಸಾಂಚ್ಯಾ ವಾಂಗ್ಡಾ ತೊ ಲೈ ಸಂಬಾಳುನ್ ಘೆವ್ನ್ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:22
27 ತಿಳಿವುಗಳ ಹೋಲಿಕೆ  

ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕರನ್ನು ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.


ಕೆಲವು ಜನರು ರಹಸ್ಯವಾಗಿ ನಿಮ್ಮ ಸಭೆಯಲ್ಲಿ ಪ್ರವೇಶಿಸಿದ್ದಾರೆ. ಇವರಿಗಾಗುವ ದಂಡನೆಯ ಕುರಿತು ಬಹುಕಾಲದ ಹಿಂದೆಯೇ ಪ್ರವಾದಿಗಳು ಬರೆದಿದ್ದಾರೆ. ಈ ಜನರು ದೇವರಿಗೆ ವಿರುದ್ಧವಾಗಿದ್ದಾರೆ. ಅವರು ಪಾಪಕೃತ್ಯಗಳನ್ನು ಮಾಡುವುದಕ್ಕಾಗಿ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಅವರು ನಮ್ಮ ಒಬ್ಬನೇ ಒಡೆಯನಾದ ಮತ್ತು ಪ್ರಭುವಾದ ಯೇಸು ಕ್ರಿಸ್ತನನ್ನು ಹಿಂಬಾಲಿಸದವರಾಗಿದ್ದಾರೆ.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


ಕುಂಬಾರನು ತನಗೆ ಇಷ್ಟಬಂದಂತೆ ಒಂದೇ ಮಣ್ಣಿನಿಂದ ವಿವಿಧ ವಸ್ತುಗಳನ್ನು ತಯಾರಿಸುವುದಿಲ್ಲವೇ? ಅವನು ಒಂದನ್ನು ವಿಶೇಷವಾದ ಬಳಕೆಗಾಗಿಯೂ ಮತ್ತೊಂದನ್ನು ದೈನಂದಿನ ಬಳಕೆಗಾಗಿಯೂ ತಯಾರಿಸುವನು.


ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ.


ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.


ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ.


ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.


ನೀನು ನಿನ್ನ ವಿಷಯದಲ್ಲಿ ‘ಯೆಹೋವನು ದೀರ್ಘಶಾಂತನು, ಬಹುಪ್ರೀತಿಯುಳ್ಳವನು, ಅಪರಾಧ, ಪಾಪಗಳನ್ನು ಕ್ಷಮಿಸುವವನಾಗಿದ್ದರೂ ಎಲ್ಲಾ ದಂಡನೆಯನ್ನು ರದ್ದುಪಡಿಸದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ನೀನೇ ಹೇಳಿರುವಿಯಲ್ಲಾ!


“ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?


ದೇವರು ನಮ್ಮನ್ನು ಆರಿಸಿಕೊಂಡದ್ದು ತನ್ನ ಕೋಪಕ್ಕೆ ಗುರಿಯಾಗಲಿ ಎಂದಲ್ಲ. ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ರಕ್ಷಣೆಯಾಗಲೆಂದೇ ದೇವರು ನಮ್ಮನ್ನು ಆರಿಸಿಕೊಂಡನು.


ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು.


ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ಬಹಳ ಹಿಂದೆ ನೋಹನ ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದವರೇ ಅವರು. ನೋಹನು ನಾವೆಯನ್ನು ಕಟ್ಟುತ್ತಿದ್ದಾಗ ದೇವರು ತಾಳ್ಮೆಯಿಂದ ಕಾಯುತ್ತಿದ್ದನು. ಕೆಲವರು ಅಂದರೆ ಎಂಟು ಮಂದಿ ಮಾತ್ರ, ಆ ನಾವೆಯಲ್ಲಿ ನೀರಿನ ಮೂಲಕ ರಕ್ಷಿಸಲ್ಪಟ್ಟರು.


ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.


ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ.


ಹಾಗೆ ಕೇಳಬೇಡಿ. ನೀವು ಕೇವಲ ಮನುಷ್ಯರು. ದೇವರನ್ನು ಪ್ರಶ್ನಿಸಲು ಮನುಷ್ಯರಿಗೆ ಯಾವ ಹಕ್ಕೂ ಇಲ್ಲ. ಮಡಕೆಯು ತನ್ನನ್ನು ತಯಾರಿಸಿದವನಿಗೆ, “ನೀನು ನನ್ನನ್ನು ಈ ರೀತಿ ತಯಾರಿಸಿದ್ದೇಕೆ” ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು