ರೋಮಾಪುರದವರಿಗೆ 9:30 - ಪರಿಶುದ್ದ ಬೈಬಲ್30 ಇದರರ್ಥವೇನೆಂದರೆ, ಯೆಹೂದ್ಯರಲ್ಲದವರು ನೀತಿವಂತರಾಗಲು ಪ್ರಯತ್ನಿಸುತ್ತಿರಲಿಲ್ಲ. ಆದರೆ ಅವರನ್ನು ನೀತಿವಂತರನ್ನಾಗಿ ಮಾಡಲಾಯಿತು. ಅವರು ನಂಬಿಕೆಯಿಂದಲೇ ನೀತಿವಂತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾದ ನೀತಿಯು ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹಾಗಾದರೆ ಏನು ಹೇಳೋಣ? ನೀತಿಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತಸೆಮನುನ್ ಅಮಿ ಮನ್ತಾಂವ್ ದೆವಾಚ್ಯಾ ವಾಂಗ್ಡಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಥವ್ನ್ ಘೆವ್ನ್ ಖಟ್ಪಟ್ ಕರಿನಸಾಲ್ಲ್ಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ವಿಶ್ವಾಸಾಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊಲೆ. ಅಧ್ಯಾಯವನ್ನು ನೋಡಿ |
ಕೇವಲ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಒಬ್ಬನು ನೀತಿವಂತನಾಗಲು ಸಾಧ್ಯವಿಲ್ಲವೆಂಬುದು ನಮಗೆ ಗೊತ್ತಿದೆ. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರಿಂದಲೇ ಒಬ್ಬನು ನೀತಿವಂತನಾಗಲು ಸಾಧ್ಯ. ಆದ್ದರಿಂದ ನೀತಿವಂತರಾಗಲು ನಾವು ಯೇಸು ಕ್ರಿಸ್ತನಲ್ಲಿ ನಂಬಿಕೆ ಇಟ್ಟೆವು. ಹೀಗಿರಲಾಗಿ, ನಾವು ನೀತಿವಂತರಾದದ್ದು ಕ್ರಿಸ್ತನಲ್ಲಿ ನಂಬಿಕೆಯಿಟ್ಟಿದ್ದರಿಂದಲೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲ್ಲ. ಇದು ಸತ್ಯ, ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರಿಂದ ಯಾರೂ ನೀತಿವಂತರಾಗಲು ಸಾಧ್ಯವಿಲ್ಲ.
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.