Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:33 - ಪರಿಶುದ್ದ ಬೈಬಲ್‌

33 ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆಚೆಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ; “ಅಬಗ್, ಸಿಯೊನಾತ್ ಮಿಯಾ ಎಕ್ ಗುಂಡೊ ಥವ್ತಾ, ತೊ ಲೊಕಾಕ್ನಿ ಅಟ್ಕಳಿ ಸರ್ಕೆ ಕರ್‍ತಾ, ತೆಂಕಾ ಪಾಡ್ವುತಲೊ ಮೊಟೊ ಗುಂಡೊ ತೊ. ಖರೆ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾ ತೆನಿ ನಿರಾಸ್ ಹೊಯ್‍ನ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:33
19 ತಿಳಿವುಗಳ ಹೋಲಿಕೆ  

ಇದಕ್ಕೋಸ್ಕರವಾಗಿಯೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುವನು: “ಚೀಯೋನಿನಲ್ಲಿ ನಾನು ಒಂದು ಮೂಲೆಗಲ್ಲು ಇಡುವೆನು, ಇದು ಬಹು ಅಮೂಲ್ಯವಾದ ಕಲ್ಲು. ಈ ವಿಶೇಷವಾದ ಕಲ್ಲಿನ ಮೇಲೆ ಎಲ್ಲವೂ ಕಟ್ಟಲ್ಪಡುವದು. ಆ ಕಲ್ಲಿನ ಮೇಲೆ ಭರವಸವಿಡುವ ಯಾವನು ಆಶಾಭಂಗಪಡುವುದಿಲ್ಲ.


ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”


ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.


ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನ್ನು ನಿರಾಶೆಗೊಳಿಸಬೇಡ.


ಹೌದು, ನನ್ನ ಪ್ರಿಯ ಮಕ್ಕಳೇ, ಆತನಲ್ಲಿಯೇ ನೆಲೆಗೊಂಡಿರೋಣ. ನಾವು ಹೀಗೆ ಮಾಡಿದರೆ, ಕ್ರಿಸ್ತನು ಮರಳಿ ಬರುವ ದಿನದಂದು ನಾವು ಭಯಪಡಬೇಕಾಗಿಲ್ಲ; ಅಡಗಿಕೊಳ್ಳುವ ಅಗತ್ಯವಿರುವುದಿಲ್ಲ; ನಾಚಿಕೆಪಡುವ ಅಗತ್ಯವೂ ಇರುವುದಿಲ್ಲ.


ನಾನು ಯಾವ ವಿಷಯದಲ್ಲಿಯೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ಧೈರ್ಯದಿಂದ ಇದ್ದೇನೆ. ನಾನು ಬದುಕಿದರೂ ಸರಿ, ಸತ್ತರೂ ಸರಿ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆ ಉಂಟಾಗಬೇಕೆಂಬುದೇ ನನ್ನ ಅಭಿಲಾಷೆ ಮತ್ತು ನಿರೀಕ್ಷೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಈ ಕಲ್ಲಿನ ಮೇಲೆ ಬೀಳುವ ಮನುಷ್ಯನು ತುಂಡುತುಂಡಾಗುತ್ತಾನೆ. ಈ ಕಲ್ಲು ಮನುಷ್ಯನ ಮೇಲೆ ಬಿದ್ದರೆ, ಅವನು ಜಜ್ಜಿಹೋಗುವನು.”


ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’


ಹೆದರಬೇಡ, ನೀನು ನಿರಾಶಳಾಗುವದಿಲ್ಲ. ಜನರು ನಿನ್ನ ವಿಷಯವಾಗಿ ಕೆಟ್ಟದ್ದನ್ನು ಆಡುವದಿಲ್ಲ. ನೀನು ಬೇಸರಗೊಳ್ಳುವದಿಲ್ಲ. ನೀನು ಯೌವ್ವನಸ್ಥಳಾಗಿರುವಾಗ ನಿನಗೆ ನಾಚಿಕೆಯಾಯಿತು. ಆದರೆ ಈಗ ನೀನು ಆ ನಾಚಿಕೆಯನ್ನು ಮರೆತುಬಿಟ್ಟವಳಾಗಿದ್ದಿ. ನಿನ್ನ ಗಂಡನನ್ನು ನೀನು ಕಳೆದುಕೊಂಡಾಗ ನೀನು ಪಟ್ಟ ನಾಚಿಕೆಯನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ.


ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ.


ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.


ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು