ರೋಮಾಪುರದವರಿಗೆ 9:5 - ಪರಿಶುದ್ದ ಬೈಬಲ್5 ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೆಂಕಾ ಹೆಬ್ರೆವ್ ಘರಾನ್ಯಾಚ್ಯಾ ಸಗ್ಳ್ಯಾಕ್ಡೆ ಗೊತ್ತ್ ಅಸಲ್ಲ್ಯಾ ಲೊಕಾಂಚ್ಯಾ ಪಿಳ್ಗಿತ್ನಾ ಧಾಡುನ್ ದಿಲ್ಲೆ ಹಾಯ್; ಅನಿ ಮಾನ್ಸಾಂಚ್ಯಾ ಜಲ್ಮಾಚ್ಯಾ ಪರ್‍ಕಾರ್ ಕ್ರಿಸ್ತ್ ಹೆಂಚ್ಯಾಚ್ ಪಿಳ್ಗಿಚೊ. ಸಗ್ಳ್ಯಾಚ್ಯಾ ವರ್‍ತಿ ರಾಜ್ ಚಾಲ್ವುತಲ್ಯಾ ದೆವಾಕ್ ಸದಾ ಸರ್ವತಾಕ್ ಹೊಗ್ಳಾಪ್ ಹೊಂವ್ದಿತ್! ಆಮೆನ್. ಅಧ್ಯಾಯವನ್ನು ನೋಡಿ |
ನಿಸ್ಸಂದೇಹವಾಗಿಯೂ ನಮ್ಮ ಆರಾಧನಾ ಜೀವಿತದ ರಹಸ್ಯವು ಮಹೋನ್ನತವಾದದ್ದು: ಕ್ರಿಸ್ತನು ಮಾನವ ದೇಹದಲ್ಲಿ ನಮಗೆ ಪ್ರತ್ಯಕ್ಷನಾದನು. ಆತನೇ ಕ್ರಿಸ್ತನೆಂದು ಪವಿತ್ರಾತ್ಮನು ನಿರೂಪಿಸಿದನು. ದೇವದೂತರಿಗೆ ಆತನು ಕಾಣಿಸಿಕೊಂಡನು. ಆತನನ್ನು ಕುರಿತ ಸುವಾರ್ತೆಯನ್ನು ಜನಾಂಗಗಳವರಿಗೆಲ್ಲ (ಯೆಹೂದ್ಯರಲ್ಲದವರಿಗೆ) ಪ್ರಸಿದ್ಧಿಪಡಿಸಲಾಯಿತು. ಲೋಕದಲ್ಲಿರುವ ಜನರು ಆತನಲ್ಲಿ ನಂಬಿಕೆಯಿಟ್ಟರು. ಆತನು ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಯೆರೆಮೀಯನು ಹನನ್ಯನಿಗೆ, “ಹಾಗೆಯೇ ಆಗಲಿ, ನೀನು ಹೇಳಿದಂತೆ ಯೆಹೋವನು ಮಾಡಲಿ. ನೀನು ಪ್ರವಾದಿಸಿದ ಸಂದೇಶವನ್ನು ಯೆಹೋವನು ನಿಜವಾಗುವಂತೆ ಮಾಡುವನೆಂದು ನಾನು ಆಶಿಸುತ್ತೇನೆ. ಯೆಹೋವನು ಬಾಬಿಲೋನಿನಿಂದ ತನ್ನ ಆಲಯದ ವಸ್ತುಗಳನ್ನು ಇಲ್ಲಿಗೆ ತರುವನೆಂದು ನಾನು ಆಶಿಸುವೆ. ತಮ್ಮ ಮನೆಗಳನ್ನು ಬಿಟ್ಟುಹೋಗಲು ಒತ್ತಾಯಿಸಲ್ಪಟ್ಟ ಜನರನ್ನು ಮತ್ತೆ ಯೆಹೋವನು ಇಲ್ಲಿಗೆ ಕರೆತರುವನೆಂದು ನಾನು ಆಶಿಸುವೆ.
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.