Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:16 - ಪರಿಶುದ್ದ ಬೈಬಲ್‌

16 “ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಸ್ರಾಯೇಲರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ಯರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಆತನ ಮುಂದೆ ಹೋಗಿ ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಇಸ್ರಾಯೆಲಾಚ್ಯಾ ಸುಮಾರ್ ಲೊಕಾಕ್ನಿ ತೊ ತೆಂಚ್ಯಾ ದೆವ್ ಸರ್ವೆಸ್ವರಾಕ್ಡೆ ಫಾಟಿ ಪರ್‍ತುನ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:16
8 ತಿಳಿವುಗಳ ಹೋಲಿಕೆ  

ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು