ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.
ಅಬ್ರಹಾಮನು ಮಕ್ಕಳನ್ನು ಪಡೆಯಲಾಗದಷ್ಟು ವೃದ್ಧನಾಗಿದ್ದನು. ಸಾರಳು ಮಕ್ಕಳನ್ನು ಪಡೆಯಲು ಸಮರ್ಥಳಾಗಿರಲಿಲ್ಲ. ಆದರೆ ಅಬ್ರಹಾಮನಿಗೆ ದೇವರಲ್ಲಿ ನಂಬಿಕೆಯಿದ್ದುದರಿಂದ, ಅವರು ಮಕ್ಕಳನ್ನು ಪಡೆಯಲು ಸಮರ್ಥರಾಗುವಂತೆ ದೇವರು ಮಾಡಿದನು.
ಆದರೆ ದೇವದೂತನು ಅವನಿಗೆ, “ಜಕರೀಯನೇ, ಹೆದರಬೇಡ. ನಿನ್ನ ಪ್ರಾರ್ಥನೆ ದೇವರಿಗೆ ಕೇಳಿಸಿತು. ನಿನ್ನ ಹೆಂಡತಿಯಾದ ಎಲಿಜಬೇತಳು ಒಂದು ಗಂಡುಮಗುವನ್ನು ಹೆರುವಳು. ನೀನು ಅವನಿಗೆ ಯೋಹಾನ ಎಂದು ಹೆಸರಿಡಬೇಕು.
ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.
ಯೆಫ್ತಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು.
ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ಆ ದುಃಖವನ್ನು ಈ ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.