Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:32 - ಪರಿಶುದ್ದ ಬೈಬಲ್‌

32 ಆತನು ಮಹಾಪುರುಷನಾಗುವನು. ಜನರು ಆತನನ್ನು ಮಹೋನ್ನತನ (ದೇವರ) ಮಗನೆಂದು ಕರೆಯುವರು. ಪ್ರಭುವಾದ ದೇವರು ಆತನಿಗೆ ಆತನ ಪೂರ್ವಿಕನಾದ ದಾವೀದನ ಅಧಿಕಾರವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ಮಹಾಪುರುಷನಾಗುವನು, ಪರಾತ್ಪರನಾದ ದೇವರ ಕುಮಾರನೆಂದು ಕರೆಯಲ್ಪಡುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಮೊಟೊ ಮಾನುಸ್ ಹೊತಾ, ಅನಿ ತೆಕಾ ಪರಮೊನ್ನತ್ ದೆವಾಚೊ ಲೆಕ್ ಮನುನ್ ಬಲ್ವುತ್ಯಾತ್.ಅನಿ ಸರ್ವೆಸ್ವರ್ ದೆವ್ ತೆಕಾ ತೆಚ್ಯಾ ಘರಾನ್ಯಾಚ್ಯಾ ದಾವಿದ್ ರಾಜಾ ಸರ್ಕೊ ರಾಜಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:32
39 ತಿಳಿವುಗಳ ಹೋಲಿಕೆ  

ಆಗ ಹೊಸ ಅರಸನು ಬರುವನು. ಆತನು ನ್ಯಾಯವಾದವುಗಳನ್ನು ಮತ್ತು ಒಳ್ಳೆಯವುಗಳನ್ನು ಮಾಡುವನು. ಆತನು ದಾವೀದನ ವಂಶದವನಾಗಿದ್ದಾನೆ. ಆತನು ಪ್ರಾಮಾಣಿಕನೂ ಪ್ರೀತಿದಯೆಗಳಿಂದ ತುಂಬಿದವನೂ ಆಗಿರುವನು. ಆತನ ನ್ಯಾಯತೀರ್ಪು ನ್ಯಾಯಕ್ಕನುಸಾರವಾಗಿರುವದು.


ದೇವದೂತನು ಮರಿಯಳಿಗೆ, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಮಹೋನ್ನತನ ಶಕ್ತಿಯು ನಿನ್ನನ್ನು ಆವರಿಸುವುದು. ಈ ಕಾರಣದಿಂದ ನಿನ್ನಲ್ಲಿ ಹುಟ್ಟುವ ಈ ಪವಿತ್ರಮಗುವು ‘ದೇವರ ಮಗ’ ಎನಿಸಿಕೊಳ್ಳುವನು.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.


“ಮಗುವೇ, ನೀನು ಮಹೋನ್ನತನ ಪ್ರವಾದಿ ಎನಿಸಿಕೊಳ್ಳುವೆ. ಪ್ರಭುವಿನ ಮುಂದೆ ಹೋಗಿ ಆತನ ಬರುವಿಕೆಗಾಗಿ ಜನರನ್ನು ಸಿದ್ಧಮಾಡುವೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ದಾವೀದನು ಒಬ್ಬ ಪ್ರವಾದಿಯಾಗಿದ್ದನು ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.


ನಿನ್ನ ಕುಟುಂಬ ಮತ್ತು ರಾಜ್ಯ ಎಂದೆಂದಿಗೂ ಸ್ಥಿರವಾಗಿರುವುದು. ನಿನ್ನ ಸಿಂಹಾಸನವು ಶಾಶ್ವತವಾಗಿರುವುದು.’”


ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.


“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”


ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.


ನಾವು ನಿನ್ನಲ್ಲಿ ನಂಬಿಕೆ ಇಡುತ್ತೇವೆ. ನೀನು ದೇವರಿಂದ ಬಂದ ಪರಿಶುದ್ಧನೆಂದು ನಮಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.


ಆದರೆ ಯೇಸು ಮೌನವಾಗಿದ್ದನು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಯೇಸುವಿಗೆ, “ಮಹಾದೇವರ ಮಗನಾದ ಕ್ರಿಸ್ತನು ನೀನೋ?” ಎಂಬ ಇನ್ನೊಂದು ಪ್ರಶ್ನೆಯನ್ನು ಕೇಳಿದನು.


“ಆದರೆ ಮನುಷ್ಯರು ತಮ್ಮ ಕೈಯಾರೆ ನಿರ್ಮಿಸಿದ ಮನೆಗಳಲ್ಲಿ ಮಹೋನ್ನತನು (ದೇವರು) ವಾಸಿಸುವುದಿಲ್ಲ. ಪ್ರವಾದಿಯು ಹೀಗೆ ಬರೆದಿದ್ದಾನೆ:


“ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದಕ್ಕೆ ಗುರುತಾಗಿ ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವೆನು. ಆದರೆ ನನ್ನ ಹಿಂದೆ ಬರುವವನು ನನಗಿಂತ ಹೆಚ್ಚಿನವನು. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.


ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು.


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.


ನಿನ್ನ ಮಕ್ಕಳು ನನ್ನ ಒಡಂಬಡಿಕೆಗೂ ನಾನು ಆಜ್ಞಾಪಿಸಿದ ಕಟ್ಟಳೆಗಳಿಗೂ ವಿಧೇಯರಾದರೆ, ನಿನ್ನ ಸಂತಾನದ ಒಬ್ಬನು ಯಾವಾಗಲೂ ರಾಜನಾಗಿರುವನು.”


“‘ನೀವು ಈ ಆಜ್ಞೆಯನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಜೆರುಸಲೇಮಿನ ದ್ವಾರಗಳಿಂದ ಬರುತ್ತಾರೆ. ಆ ರಾಜರು ರಥಗಳಲ್ಲಿಯೂ ಅಶ್ವಾರೂಢರಾಗಿಯೂ ಬರುವರು. ಯೆಹೂದದ ಮತ್ತು ಜೆರುಸಲೇಮಿನ ಜನನಾಯಕರುಗಳು ಆ ರಾಜರ ಜೊತೆಯಲ್ಲಿ ಬರುವರು. ಜೆರುಸಲೇಮ್ ಪಟ್ಟಣದಲ್ಲಿ ಜನರು ಯಾವಾಗಲೂ ವಾಸವಾಗಿರುವರು.


‘ಯೆಹೂದದ ರಾಜನೇ, ಯೆಹೋವನಿಂದ ಬಂದ ಸಂದೇಶವನ್ನು ಕೇಳು. ನೀನು ದಾವೀದನ ಸಿಂಹಾಸನಾರೂಢನಾಗಿ ರಾಜ್ಯಭಾರ ಮಾಡುವೆ, ಅದಕ್ಕಾಗಿ ಕೇಳು. ರಾಜನೇ, ನೀನು ಮತ್ತು ನಿನ್ನ ಅಧಿಕಾರಿಗಳು ಚೆನ್ನಾಗಿ ಕೇಳಬೇಕು. ಜೆರುಸಲೇಮಿನ ದ್ವಾರಗಳ ಮೂಲಕ ಬರುವ ನಿನ್ನ ಜನರೆಲ್ಲರೂ ಯೆಹೋವನ ಸಂದೇಶವನ್ನು ಕೇಳಬೇಕು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು