Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:41 - ಪರಿಶುದ್ದ ಬೈಬಲ್‌

41 ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಹಾರಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಮರಿಚ್ಯಾ ನಮಸ್ಕಾರಾಚೊ ಆವಾಜ್ ಆಯ್ಕಲ್ಲ್ಯಾ ತನ್ನಾ, ಎಲಿಜಾಬೆತಿಚ್ಯಾ ಪೊಟಾತ್ಲ್ಯಾ ಪೊರಾನ್ ಹುಡಿ ಮಾರ್‍ಲ್ಯಾನ್, ತನ್ನಾ ಎಲಿಜಾಬೆತ್ ಪವಿತ್ರ್ ಆತ್ಮ್ಯಾನ್ ಭರಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:41
15 ತಿಳಿವುಗಳ ಹೋಲಿಕೆ  

ಬಳಿಕ ಯೋಹಾನನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:


ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.


ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ,


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


ಆದರೆ ಸ್ತೆಫನನು ಪವಿತ್ರಾತ್ಮಭರಿತನಾಗಿದ್ದನು. ಅವನು ಆಕಾಶದತ್ತ ಕಣ್ಣೆತ್ತಿ ನೋಡಿ, ದೇವರ ಮಹಿಮೆಯನ್ನೂ ಯೇಸುವು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ಕಂಡು,


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ.


ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.


ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು.


ಅಲ್ಲಿ ಜಕರೀಯನ ಮನೆಯೊಳಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.


ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.


ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು