Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:43 - ಪರಿಶುದ್ದ ಬೈಬಲ್‌

43 ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನನ್ನ ಸ್ವಾವಿುಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಾಜ್ಯಾ ಮಾಲ್ಕಾಚಿ ಬಾಯ್ ಮಾಕಾ ಭೆಟುಕ್ ಯೆತಲೆ,ಹೆ ಎವ್ಡೆ ಮೊಟೆ ಘಡಿತ್ ಮಾಜೆ ವಾಂಗ್ಡಾ ಕಶೆ ಘಡುಕ್ ಹೊತಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:43
15 ತಿಳಿವುಗಳ ಹೋಲಿಕೆ  

ತೋಮನು ಯೇಸುವಿಗೆ, “ನನ್ನ ಪ್ರಭುವೇ, ನನ್ನ ದೇವರೇ!” ಎಂದು ಹೇಳಿದನು.


ನೀವು ಯಾವುದನ್ನೇ ಮಾಡುವಾಗ, ಸ್ವಾರ್ಥವಾಗಲಿ ಅಹಂಕಾರವಾಗಲಿ ನಿಮಗೆ ಮಾರ್ಗದರ್ಶಕವಾಗದಂತೆ ನೋಡಿಕೊಳ್ಳಿರಿ. ದೀನಭಾವವುಳ್ಳವರಾಗಿದ್ದು ನಿಮಗಿಂತಲೂ ಹೆಚ್ಚಾಗಿ ಬೇರೆಯವರಿಗೆ ಗೌರವವನ್ನು ಕೊಡಿರಿ.


ಈ ದಿನ ನಿಮಗೋಸ್ಕರ ದಾವೀದನ ಊರಿನಲ್ಲಿ ರಕ್ಷಕನು ಜನಿಸಿದ್ದಾನೆ. ಆತನೇ ಪ್ರಭುವಾದ ಕ್ರಿಸ್ತನು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.


ಅಬೀಗೈಲಳು ಸಾಷ್ಟಾಂಗನಮಸ್ಕಾರಮಾಡಿ, “ನಾನು ನಿಮ್ಮ ದಾಸಿ. ನಾನು ನಿಮ್ಮ ಸೇವೆಗೆ ಸಿದ್ಧಳಾಗಿದ್ದೇನೆ. ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯಲು ಸಿದ್ಧಳಾಗಿರುವೆ” ಎಂದಳು.


ಅಷ್ಟೇ ಅಲ್ಲ, ನನ್ನ ಪ್ರಭುವಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ಎಲ್ಲಾ ಸಂಗತಿಗಳಿಗಿಂತಲೂ ಅತಿಶ್ರೇಷ್ಠವಾದದ್ದೆಂದು ನನಗೆ ಮನದಟ್ಟಾಗಿದೆ. ನಾನು ಯಾವುದನ್ನು ಮುಖ್ಯವಾದವುಗಳೆಂದು ಪರಿಗಣಿಸಿದ್ದೆನೋ ಅವುಗಳನ್ನೆಲ್ಲ ಕ್ರಿಸ್ತನ ನಿಮಿತ್ತ ಕಳೆದುಕೊಂಡೆನು. ಅವುಗಳೆಲ್ಲ ನಿಷ್ಪ್ರಯೋಜಕವಾದವುಗಳೆಂದು ನನಗೆ ತಿಳಿದಿದೆ.


ನೀವು ನನ್ನನ್ನು, ‘ಗುರುವೇ, ಪ್ರಭುವೇ’ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.


ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು.


ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು.


ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.


ಯೇಸುವು ಜನರೊಂದಿಗೆ ಮಾತಾಡುತ್ತಿರುವಾಗ, ಆತನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡರು. ಅವರು ಆತನೊಂದಿಗೆ ಮಾತಾಡಬೇಕೆಂದಿದ್ದರು.


ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.


ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು