Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:53 - ಪರಿಶುದ್ದ ಬೈಬಲ್‌

53 ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

53 ತೆನಿ ಭುಕೆನ್ ಹೊತ್ತ್ಯಾಕ್ನಿ ಬರಿ-ಬರಿ ಸಾಮಾನಾ ದಿಲ್ಯಾನ್, ಅನಿ ಸಾವ್ಕಾರಾಕ್ನಿ ಖಾಲಿ ಹಾತಾನಿ ಫಾಟಿ ಪರ್ತುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:53
21 ತಿಳಿವುಗಳ ಹೋಲಿಕೆ  

ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.


ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು. ಆದರೆ ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರು ಸುವರಗಳನ್ನು ಹೊಂದಿಕೊಳ್ಳುವರು.


“ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ.


ನೀತಿಗಾಗಿ ತವಕಪಡುವವರು ಧನ್ಯರು. ದೇವರು ಅವರನ್ನು ಸಂತೃಪ್ತಿಪಡಿಸುವನು.


ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.


ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.


ಹಿಂದೆ ಆಹಾರವನ್ನು ಸಮೃದ್ಧಿಕರವಾಗಿ ಹೊಂದಿದ್ದವರು ಆಹಾರಕ್ಕಾಗಿ ದುಡಿಯಬೇಕಾಗುವುದು. ಹಿಂದೆ ಆಹಾರವಿಲ್ಲದೆ ಹಸಿದಿದ್ದವರಿಗೆ ಇಂದು ಆಹಾರ ಸಮೃದ್ಧಿಕರವಾಗಿರುವುದು! ಬಂಜೆಗೆ ಈಗ ಏಳು ಜನ ಮಕ್ಕಳಿರುವರು. ಆದರೆ ಹೆಚ್ಚು ಮಕ್ಕಳಿದ್ದ ತಾಯಿ ಇಂದು ವೇದನೆಗೊಂಡಿರುವಳು ಏಕೆಂದರೆ ಅವಳ ಮಕ್ಕಳೆಲ್ಲ ಸತ್ತುಹೋಗಿದ್ದಾರೆ.


ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.


ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.


ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು.


ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು