Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:54 - ಪರಿಶುದ್ದ ಬೈಬಲ್‌

54 ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54-55 ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ನೆರವಾದನು ತನ್ನ ದಾಸ ಇಸ್ರಯೇಲನಿಗೆ I ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54-55 ಆತನು ನಮ್ಮ ಪೂರ್ವಿಕರಿಗೆ ಹೇಳಿದ್ದಕ್ಕೆ ಸರಿಯಾಗಿ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬದನ್ನು ನೆನಸಿಕೊಂಡು ತನ್ನ ಸೇವಕನಾದ ಇಸ್ರಾಯೇಲನನ್ನು ಕೈಹಿಡಿದಿದ್ದಾನೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54-55 ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ಅಮ್ಚ್ಯಾ ಫಾಟ್ಲ್ಯಾ ಲೊಕಾಕ್ನಿ ದಿಲ್ಲಿ ಗೊಸ್ಟ್ ತೆನಿ ರಾಕ್ಲ್ಯಾನ್, ಅನಿ ಅಪ್ನಾಚ್ಯಾ ಸೆವಕಾಕ್ ಇಸ್ರಾಯೆಲಾಕ್ ಮಜತ್ ಕರುಕ್ ಮನುನ್ ತೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:54
16 ತಿಳಿವುಗಳ ಹೋಲಿಕೆ  

ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.


ನೀನು ಯಾಕೋಬನಿಗೆ ನಂಬಿಗಸ್ತನಾಗುವೆ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ ನಂಬಿಗಸ್ತನಾಗುವೆ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.


“ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.


ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.


ದೂರದಿಂದ ಯೆಹೋವನು ತನ್ನ ಜನರಿಗೆ ದರ್ಶನವನ್ನು ಕೊಡುವನು. ಯೆಹೋವನು ಹೀಗೆನ್ನುವನು, “ನಾನು ನಿಮ್ಮನ್ನು ಪ್ರೀತಿಸುತ್ತೇನೆ, ನನ್ನ ಪ್ರೇಮವು ಶಾಶ್ವತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


ಆತನು ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸಿ ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಡುತ್ತಾನೆ.


ಕರುಣೆ ತೋರಬೇಕೆಂದುಕೊಂಡು ತನ್ನ ಸೇವಕನಾದ ಇಸ್ರೇಲನನ್ನು ಕೈ ಹಿಡಿದಿದ್ದಾನೆ” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು