ಲೂಕ 1:65 - ಪರಿಶುದ್ದ ಬೈಬಲ್65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201965 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)65 ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ65 ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್65 ಹೆ ಆಯ್ಕಲ್ಲಿ ಅಜು ಬಾಜುಚಿ ಲೊಕಾ ಭಿಂಯಾನ್ ಭರ್‍ಲಿ,ಅನಿ ಹಿ ಖಬರ್ ಜುದೆಯಾಚ್ಯಾ ಮಡ್‍ಯಾಂಚ್ಯಾ ಜಾಗ್ಯಾರ್ ಸಗ್ಳ್ಯಾಕ್ಡೆ ಫರ್ಗಟ್ಲಿ. ಅಧ್ಯಾಯವನ್ನು ನೋಡಿ |
ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”