ಲೂಕ 1:66 - ಪರಿಶುದ್ದ ಬೈಬಲ್66 ಈ ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಈ ಮಗುವಿನ ಸಂಗಡವಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಕೇಳಿದವರೆಲ್ಲರೂ - ಆಹಾ, ಈ ಕೂಸು ಎಂಥವನಾಗುವನೋ ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಹಸ್ತವು ಅದರ ಮೇಲೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್66 ಹಿ ಖಬರ್ ಆಯ್ಕಲ್ಲೆ ಸಗ್ಳೆ ಜಾನಾ “ಹ್ಯೊ ಪೊರ್ ಫಿಡೆ ಕಾಯ್ ಹೊತಾ ಅಸಿಲ್?” ಮನುನ್ ಇಚಾರುಕ್‍ಲಾಲೆ, ದೆವಾಚೊ ಬಳ್ ತ್ಯಾ ಪೊರಾ ವರ್‍ತಿ ಹೊತ್ತೊ. ಅಧ್ಯಾಯವನ್ನು ನೋಡಿ |
ನಿಮಗೆ ನಿರೀಕ್ಷೆ ಇರುವುದರಿಂದಲೇ ಕ್ರಿಸ್ತನಲ್ಲಿ ನಂಬಿಕೆ ಇಟ್ಟಿದ್ದೀರಿ ಮತ್ತು ದೇವಜನರನ್ನು ಪ್ರೀತಿಸುತ್ತೀರಿ. ನೀವು ನಿರೀಕ್ಷಿಸುವಂಥವುಗಳು ನಿಮಗೋಸ್ಕರ ಪರಲೋಕದಲ್ಲಿ ಸಿದ್ಧ ಮಾಡಲ್ಪಟ್ಟಿವೆ ಎಂಬುದು ನಿಮಗೆ ತಿಳಿದಿದೆ. ನಿಮಗೆ ತಿಳಿಸಲಾದ ಸತ್ಯವಾಕ್ಯವನ್ನು ಅಂದರೆ ಸುವಾರ್ತೆಯನ್ನು ನೀವು ಕೇಳಿದಾಗ ಈ ನಿರೀಕ್ಷೆಯ ಬಗ್ಗೆ ತಿಳಿದುಕೊಂಡಿರಿ. ನೀವು ಸುವಾರ್ತೆಯನ್ನು ಕೇಳಿ ದೇವರ ಕೃಪೆಯ ಸತ್ಯಾರ್ಥವನ್ನು ತಿಳಿದುಕೊಂಡಂದಿನಿಂದ ಸುವಾರ್ತೆಯು ನಿಮ್ಮಲ್ಲಿ ವೃದ್ಧಿಯಾಗುತ್ತಿದೆ ಮತ್ತು ಜನರಿಗೆ ಆಶೀರ್ವಾದಕರವಾಗಿದೆ. ಅದೇ ರೀತಿ ಪ್ರಪಂಚದ ಎಲ್ಲಾ ಕಡೆಗಳಲ್ಲೂ ಸುವಾರ್ತೆಯು ವೃದ್ಧಿಯಾಗುತ್ತಿದೆ ಮತ್ತು ಆಶೀರ್ವಾದಕರವಾಗಿದೆ.