ಲೂಕ 1:70 - ಪರಿಶುದ್ದ ಬೈಬಲ್70 ಇದನ್ನು ಆತನು ಪೂರ್ವಕಾಲದ ತನ್ನ ಪವಿತ್ರ ಪ್ರವಾದಿಗಳ ಮೂಲಕ ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201970 ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)70 ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್70 ಲೈ ವರ್ಸಾಂಚ್ಯಾ ಫಾಟಿಚ್ ಅಪ್ನಾಚ್ಯಾ ಪವಿತ್ರ್ ಪ್ರವಾದ್ಯಾಂಚ್ಯಾ ತೊಂಡಾನಿತ್ನಾ, ತೆನಿ ಗೊಸ್ಟ್ ದಿಲ್ಲ್ಯಾ ಸರ್ಕೆ ಅಧ್ಯಾಯವನ್ನು ನೋಡಿ |
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.