ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.
ಈ ವರ್ಗದವರನ್ನು ಕ್ರಮವಾಗಿ ದೇವಾಲಯದಲ್ಲಿ ಸೇವೆಮಾಡಲು ಆರಿಸಲಾಯಿತು. ಇವರು ಆರೋನನ ಆರಾಧನಾ ಪದ್ದತಿಯನ್ನು ಅನುಸರಿಸಿದರು. ಇಸ್ರೇಲರ ದೇವರಾದ ಯೆಹೋವನು ಆರಾಧನಾ ಕ್ರಮಗಳನ್ನು ಆರೋನನಿಗೆ ತಿಳಿಸಿದ್ದನು.
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.
ಹೆರೋದನು ಜುದೇಯವನ್ನು ಆಳುತ್ತಿದ್ದ ಕಾಲದಲ್ಲಿ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಜಕರೀಯನು ಅಬೀಯನ ವರ್ಗಕ್ಕೆ ಸೇರಿದವನು. ಜಕರೀಯನ ಹೆಂಡತಿ ಆರೋನನ ಕುಟುಂಬದವಳು. ಆಕೆಯ ಹೆಸರು ಎಲಿಜಬೇತ್.
ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.
ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
“ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.
“ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.
ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.
ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.
ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.