ಲೂಕ 1:9 - ಪರಿಶುದ್ದ ಬೈಬಲ್9 ಯಾಜಕರು ಧೂಪವನು ಅರ್ಪಿಸುವುದಕ್ಕಾಗಿ ತಮ್ಮ ಸಂಪ್ರದಾಯದ ಪ್ರಕಾರ ಚೀಟಿಹಾಕಿ ಒಬ್ಬ ಯಾಜಕನನ್ನು ಆರಿಸುತ್ತಿದ್ದರು. ಈ ಸಲ ಅದು ಜಕರೀಯನ ಪಾಲಿಗೆ ಬಂದಿತು. ಆದ್ದರಿಂದ ಜಕರೀಯನು ಧೂಪ ಅರ್ಪಿಸುವುದಕ್ಕಾಗಿ ಪ್ರಭುವಿನ ಆಲಯದೊಳಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವುದಕ್ಕೆ ಯಾಜಕರ ಪದ್ಧತಿಯ ಪ್ರಕಾರ ಚೀಟು ಹಾಕಲು ಅದು ಅವನ ಪಾಲಿಗೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇವಾಲಯದೊಳಕ್ಕೆ ಹೋಗಿ ಧೂಪವನ್ನರ್ಪಿಸುವದು ಯಾಜಕರ ಮರ್ಯಾದೆಯ ಪ್ರಕಾರ ಅವನ ಪಾಲಿಗೆ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಯಾಜಕಾಂಚ್ಯಾ ಪದ್ದತಿ ಸರ್ಕೆ ದೆವಾಚ್ಯಾ ಗುಡಿತ್ ಧುಪ್ ಘಾಲುಕ್ ಮನುನ್ ಜೆಕರಿಯಾಕ್ ಚಿಟಿಯಾ ಘಾಲುನ್ ಎಚುನ್ ಕಾಡಲ್ಲ್ಯಾನಿ. ಅಧ್ಯಾಯವನ್ನು ನೋಡಿ |
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.