ಲೂಕ 10:16 - ಪರಿಶುದ್ದ ಬೈಬಲ್16 “ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅನಿ ಅಪ್ನಾಚ್ಯಾ ಶಿಸಾಕ್ನಿ “ಜೆ ಕೊನ್ ತುಮ್ಕಾ ಆಯಿಕ್ತಾ, ತೊ ಮಾಕಾ ಆಯಿಕ್ತಾ; ಕೊನ್ ತುಮ್ಕಾ ಮರ್‍ಯಾದ್ ದಿ ನಾ, ತೊ ಮಾಕಾ ಮರ್‍ಯಾದ್ ದಿ ನಾ; ಅನಿ ಕೊನ್ ಮಾಕಾ ಮರ್‍ಯಾದ್ ದಿ ನಾ, ತೊ ಮಾಕಾ ಧಾಡಲ್ಲ್ಯಾಕ್ ಮರ್‍ಯಾದ್ ದಿ ನಾ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.