ಲೂಕ 10:17 - ಪರಿಶುದ್ದ ಬೈಬಲ್17 ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು - ಸ್ವಾಮೀ, ದೆವ್ವಗಳು ಕೂಡಾ ನಿನ್ನ ಹೆಸರನ್ನು ಕೇಳಿ ನಮಗೆ ಅಧೀನವಾಗುತ್ತವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾ ಸತ್ತರಾರ್ ದೊಗೆ ಜಾನಾ ಲೈ ಕುಶಿ-ಕುಶಿನ್ ಪರ್ತುನ್ ಯೆಲ್ಯಾನಿ. ಅನಿ ಜೆಜುಕ್ “ಧನಿಯಾ, ತುಜೆ ನಾವ್ ಘೆವ್ನ್ ಅಮಿ ಗಿರ್‍ಯಾಕ್ನಿ ಸೈತ್ ಕಾಯ್ಬಿ ಸಾಂಗ್ಲ್ಯಾರ್, ತೆನಿ ಅಮಿ ಸಾಂಗಟಲ್ಲೆ ಆಯ್ಕಿತ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.