ಲೂಕ 10:20 - ಪರಿಶುದ್ದ ಬೈಬಲ್20 ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖರೆ ಗಿರೆ ತುಮಿ ಸಾಂಗಟಲ್ಲೆ ಆಯಿಕ್ತ್ಯಾತ್ ಮನುನ್ ಕುಶಿ ಹೊವ್‍ನಕಾಶಿ; ಸರ್‍ಗಾತ್ ತುಮ್ಚೆ ನಾವ್ ಲಿವಲ್ಲೆ ಹಾಯ್ ಮನುನ್ ಕುಶಿ ಹೊವಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.