Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:32 - ಪರಿಶುದ್ದ ಬೈಬಲ್‌

32 ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದೇ ರೀತಿಯಲ್ಲಿ ಒಬ್ಬ ಲೇವಿಯನೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು ವಾರೆಯಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದೇ ಪ್ರಕಾರ ಒಬ್ಬ ಲೇವಿಯೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತ್ಯಾಚ್ ವಾಟೆನ್ ಎಕ್ ಲೆವಿತ್ ಯೆಲೊ, ತೆನಿ ಧುರ್‍ನಾಚ್ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ಅನಿ ಎಕ್ ಬಾಜುನ್ ಹೊವ್ನ್, ತೊ ದಾಟುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:32
8 ತಿಳಿವುಗಳ ಹೋಲಿಕೆ  

ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ಕೆಡುಕರು ನನ್ನನ್ನು ಗೇಲಿ ಮಾಡುವರು. ಅವರು ನನ್ನನ್ನು ನೋಡಿ ತಲೆಯಾಡಿಸುವರು.


ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;


ನೀವು ನಿಮ್ಮ ಊಟವನ್ನು ಹಸಿದವರೊಂದಿಗೆ ಹಂಚಿಕೊಳ್ಳುವದನ್ನು ನಾನು ನೋಡಲು ಆಶಿಸುತ್ತೇನೆ. ಮನೆಗಳಿಲ್ಲದ ಬಡ ಜನರನ್ನು ಕಂಡುಹಿಡಿದು ಅವರನ್ನು ನಿಮ್ಮ ಮನೆಗಳಿಗೆ ಕರೆದುಕೊಂಡು ಬರುವದನ್ನು ನೋಡಲು ಆಶಿಸುತ್ತೇನೆ. ಬಟ್ಟೆ ಇಲ್ಲದ ಒಬ್ಬ ಮನುಷ್ಯನನ್ನು ನೋಡಿದರೆ ನೀವು ನಿಮ್ಮ ಬಟ್ಟೆಯನ್ನು ಅವನಿಗೆ ಕೊಡಿರಿ. ಅವರಿಗೆ ಸಹಾಯ ಮಾಡಲು ಹಿಂಜರಿಯಬೇಡಿರಿ. ಅವರು ನಿಮ್ಮಂತೆ ಮನುಷ್ಯರಲ್ಲವೋ?”


“ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು.


“ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು.


ಪೌಲನು ಅವನಿಗೆ, “ಹಾನಿ ಮಾಡಿಕೊಳ್ಳಬೇಡ! ನಾವೆಲ್ಲಾ ಇಲ್ಲೇ ಇದ್ದೇವೆ!” ಎಂದು ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು