Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:33 - ಪರಿಶುದ್ದ ಬೈಬಲ್‌

33 “ಬಳಿಕ ಒಬ್ಬ ಸಮಾರ್ಯದವನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಾ ಆ ಸ್ಥಳಕ್ಕೆ ಬಂದನು. ಅವನು ಗಾಯಗೊಂಡಿದ್ದ ಮತ್ತು ದಾರಿಯಲ್ಲಿ ಬಿದ್ದುಕೊಂಡಿದ್ದ ಮನುಷ್ಯನನ್ನು ನೋಡಿ ಬಹಳ ಮರುಕಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಒಬ್ಬ ಸಮಾರ್ಯದವನು ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದು ಅವನನ್ನು ಕಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಖರೆ ಎಕ್ ಸಮಾರಿಯಾಚೊ ಮಾನುಸ್ ತ್ಯಾ ವಾಟೆನ್ ಜಾವ್‍ಲಾಗಲ್ಲೊ, ಅನಿ ತೆನಿ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ಬಗುನ್, ತೆಕಾ ತೆಚೊ ಪಾಪ್ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:33
14 ತಿಳಿವುಗಳ ಹೋಲಿಕೆ  

ನಿನ್ನ ಜನರ ಎಲ್ಲಾ ಪಾಪಗಳನ್ನು ಕ್ಷಮಿಸು. ಅವರು ನಿನಗೆ ವಿರುದ್ಧವಾದುದಕ್ಕೆ ಅವರನ್ನು ಕ್ಷಮಿಸು. ಅವರ ಶತ್ರುಗಳು ಅವರಿಗೆ ದಯೆತೋರಿಸುವಂತೆ ಮಾಡು.


ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ


ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.


ಹೀಗಿರಲು ನಾನು ನಿನಗೆ ಕರುಣೆ ತೋರಿದಂತೆ ನಿನ್ನ ಜೊತೆ ಸೇವಕನಿಗೂ ನೀನು ಕರುಣೆ ತೋರಿಸಬೇಕಿತ್ತು’ ಎಂದು ಹೇಳಿ


ಯೇಸು ಈ ಹನ್ನೆರಡು ಅಪೊಸ್ತಲರಿಗೆ ಕೆಲವು ಆಜ್ಞೆಗಳನ್ನು ನೀಡಿ ಪರಲೋಕರಾಜ್ಯವನ್ನು ಕುರಿತು ತಿಳಿಸುವುದಕ್ಕಾಗಿ ಅವರನ್ನು ಕಳುಹಿಸಿದನು. ಯೇಸು ಅವರಿಗೆ ಹೇಳಿದ್ದೇನೆಂದರೆ: “ಯೆಹೂದ್ಯರಲ್ಲದ ಜನರ ಬಳಿಗಾಗಲಿ ಸಮಾರ್ಯದವರು ವಾಸಿಸುವ ಯಾವ ಊರಿಗಾಗಲಿ ಹೋಗಬೇಡಿ.


ಯೆಹೂದ್ಯರು, “ನಾವು ನಿನ್ನನ್ನು ಸಮಾರ್ಯದವನೆಂದು ಹೇಳುತ್ತೇವೆ! ನಿನ್ನೊಳಗೆ ದೆವ್ವವು ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ” ಎಂದು ಉತ್ತರಕೊಟ್ಟರು.


ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)


ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.


ನಂತರ, ಒಬ್ಬ ಲೇವಿಯು ಅದೇ ದಾರಿಯಲ್ಲಿ ಹೋಗುತ್ತಾ ಅವನ ಹತ್ತಿರ ಬಂದನು. ಲೇವಿಯು ಗಾಯಗೊಂಡಿದ್ದ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯ ಮಾಡದೆ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು