40 ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.
40 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
40 ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.
40 ಆದರೆ ಮಾರ್ಥಳು ಬಹಳ ಸೇವೆಯ ವಿಷಯವಾಗಿ ಬೇಸತ್ತು ಆತನ ಬಳಿಗೆ ಬಂದು - ಸ್ವಾಮೀ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು ಅಂದಳು.
40 ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.