ಲೂಕ 10:42 - ಪರಿಶುದ್ದ ಬೈಬಲ್42 ಒಂದೇ ಒಂದು ಮುಖ್ಯವಾದದ್ದು. ಮರಿಯಳು ಮಾಡಿದ ಆಯ್ಕೆ ಸರಿಯಾದದ್ದು. ಆಕೆಯಿಂದ ಅದು ಎಂದಿಗೂ ತೆಗೆಯಲ್ಪಡುವುದಿಲ್ಲ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಖರೆ, ಮರಿನ್ ಲೈ ಬರೆ ಹೊತ್ತೆ ಎಚುನ್ ಕಾಡ್ಲಿನಾಯ್, ಅನಿ ತೆ ಕೊನಾಕ್ಬಿ ತಿಚೆಕ್ನಾ ಕಾಡುನ್ ಘೆವ್ಕ್ ಹೊಯ್ನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.