Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:7 - ಪರಿಶುದ್ದ ಬೈಬಲ್‌

7 ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳುಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದುಸ್ರ್ಯಾ ಘರಾತ್ನಿ ಜಾವ್‍ನಕಾಶಿ ತುಮ್ಕಾ ಸ್ವಾಗತ್ ಕರಲ್ಲ್ಯಾ ಎಕುಚ್ ಘರಾತ್ ರ್‍ಹಾವಾ, ತೆನಿ ದಿಲ್ಲೆ ಖಾವಾ, ಫಿವಾ ಕಶ್ಯಾಕ್ ಮಟ್ಲ್ಯಾರ್ ರಾಬಲ್ಲ್ಯಾಕ್ ತೆಚಿ ಮಜುರಿ ಗಾವುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:7
18 ತಿಳಿವುಗಳ ಹೋಲಿಕೆ  

ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.


ದೇವರ ವಾಕ್ಯವನ್ನು ಕಲಿತುಕೊಳ್ಳುವವನು, (ತನಗೆ) ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಒಳ್ಳೆತನಗಳಲ್ಲಿ ಪಾಲು ಕೊಡತಕ್ಕದ್ದು.


ನೀವು ಒಂದು ಮನೆಯಲ್ಲಿ ಇಳಿದುಕೊಂಡಾಗ, ಆ ಊರನ್ನು ಬಿಟ್ಟುಹೋಗುವ ಸಮಯದವರೆಗೂ ಅಲ್ಲೇ ತಂಗಿರಿ.


ನೀವು ಒಂದು ಮನೆಯಲ್ಲಿ ಇಳಿದುಕೊಂಡ ಮೇಲೆ ಆ ಊರನ್ನು ಬಿಡುವವರೆಗೆ ಆ ಮನೆಯಲ್ಲಿರಿ.


ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.


ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.


ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.


ಅಲ್ಲಿಗೆ ನಿಮ್ಮ ಹೆಂಡತಿ ಮಕ್ಕಳೊಂದಿಗೆ, ನಿಮ್ಮ ಸೇವಕರೊಂದಿಗೆ ಮತ್ತು ನಿಮ್ಮ ಪಟ್ಟಣದಲ್ಲಿ ಸ್ವಾಸ್ತ್ಯವನ್ನು ಹೊಂದದೆ ಇರುವ ಲೇವಿಯರೊಂದಿಗೆ ಹೋಗಿ ಯೆಹೋವನ ಸಮಕ್ಷಮದಲ್ಲಿ ಸಂತೋಷಪಡಬೇಕು.


ಆದರೆ ಪೌಲ ಸೀಲರು ಸೆರೆಮನೆಯಿಂದ ಹೊರಟು ಲಿಡಿಯಾಳ ಮನೆಗೆ ಹೋದರು. ಅಲ್ಲಿ ಅವರು ಕೆಲವು ವಿಶ್ವಾಸಿಗಳನ್ನು ಕಂಡು ಅವರನ್ನು ಸಂತೈಸಿದರು. ಬಳಿಕ ಪೌಲ ಸೀಲರು ಅಲ್ಲಿಂದ ಹೊರಟುಹೋದರು.


ಆ ಮನೆಯಲ್ಲಿ ಶಾಂತಸ್ವಭಾವದ ಮನುಷ್ಯನಿದ್ದರೆ, ನಿಮ್ಮ ಆಶೀರ್ವಾದ ಅವನಿಗೆ ದೊರೆಯುವುದು. ಅವನು ಶಾಂತಸ್ವಭಾವದವನಾಗಿಲ್ಲದಿದ್ದರೆ ನಿಮ್ಮ ಆಶೀರ್ವಾದ ನಿಮಗೇ ಹಿಂತಿರುಗಿ ಬರುವುದು.


ಉಳಿದದ್ದನ್ನು ನೀವು ಮತ್ತು ನಿಮ್ಮ ಕುಟುಂಬದವರು ಎಲ್ಲಿ ಬೇಕಾದರೂ ತಿನ್ನಬಹುದು. ನೀವು ದೇವದರ್ಶನಗುಡಾರದಲ್ಲಿ ಮಾಡುವ ಕೆಲಸಕ್ಕೆ ಇದು ನಿಮಗೆ ಪ್ರತಿಫಲವಾಗಿದೆ.


ಆ ಲೇವಿಯನು ಇತರ ಲೇವಿಯರೊಂದಿಗೆ ಸಮಾನ ಪಾಲನ್ನು ಹೊಂದುವನು. ಇದಲ್ಲದೆ ಅವನ ಕುಟುಂಬದವರು ಯಥಾಪ್ರಕಾರ ತಮಗೆ ಬರತಕ್ಕ ಪಾಲನ್ನೂ ಹೊಂದುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು