Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:9 - ಪರಿಶುದ್ದ ಬೈಬಲ್‌

9 ಅಲ್ಲಿಯ ರೋಗಿಗಳನ್ನು ವಾಸಿಮಾಡಿರಿ. ಅಲ್ಲಿಯ ಜನರಿಗೆ, ‘ದೇವರ ರಾಜ್ಯವು ಸಮೀಪಿಸುತ್ತಿದೆ!’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಲ್ಲಿರುವ ರೋಗಿಗಳಿಗೆ ವಾಸಿಮಾಡಿ ಅವರಿಗೆ - ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದದೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ಗಾಂವಾತ್ಲ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಗುನ್ ಕರಾ ಅನಿ ಥೈತ್ಲ್ಯಾ ಲೊಕಾಕ್ನಿ “ದೆವಾಚೆ ರಾಜ್ ತುಮ್ಚ್ಯಾ ಜಗ್ಗೊಳ್ ಯೆಲಾ” ಮನುನ್ ಸಾಂಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:9
15 ತಿಳಿವುಗಳ ಹೋಲಿಕೆ  

“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.


‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ದೇವರ ರಾಜ್ಯದ ಬಗ್ಗೆ ತಿಳಿಸುವುದಕ್ಕೂ ಅಸ್ವಸ್ಥರಾದವರನ್ನು ವಾಸಿಮಾಡುವುದಕ್ಕೂ ಯೇಸು ಅಪೊಸ್ತಲರನ್ನು ಕಳುಹಿಸಿದನು.


“ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”


ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.


ದೆವ್ವಗಳಿಂದ ಪೀಡಿತರಾಗಿದ್ದ ಅನೇಕರನ್ನು ಶಿಷ್ಯರು ಬಿಡುಗಡೆ ಮಾಡಿದರು ಮತ್ತು ಕಾಯಿಲೆಯ ಜನರಿಗೆ ಎಣ್ಣೆಯನ್ನು ಹಚ್ಚಿ ಗುಣಪಡಿಸಿದರು.


ನಂತರ ಯೇಸು, “ದೇವರ ರಾಜ್ಯದ ಬಗ್ಗೆ ವಿವರಿಸಲು ನಾನು ನಿಮಗೆ ಯಾವ ಸಾಮ್ಯವನ್ನು ಹೇಳಲಿ?


ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.


“ನಾಲ್ಕನೇ ರಾಜ್ಯದ ಅರಸರ ಕಾಲದಲ್ಲಿ ಪರಲೋಕದ ದೇವರು ಇನ್ನೊಂದು ಹೊಸ ಸಾಮ್ರಾಜ್ಯವನ್ನು ಸ್ಥಾಪಿಸುವನು. ಈ ಸಾಮ್ರಾಜ್ಯವು ಎಂದೆಂದಿಗೂ ಉಳಿಯುವದು. ಎಂದಿಗೂ ಅಳಿಯದು; ಬೇರೊಂದು ಜನರ ಗುಂಪಿಗೆ ಹೋಗದಂಥ ಸಾಮ್ರಾಜ್ಯವಾಗಿರುವುದು. ಈ ಸಾಮ್ರಾಜ್ಯವು ಉಳಿದೆಲ್ಲ ಸಾಮ್ರಾಜ್ಯಗಳನ್ನು ನಾಶಮಾಡಿ ಕೊನೆಗಾಣಿಸುವುದು. ಆದರೆ ಆ ಸಾಮ್ರಾಜ್ಯವು ಮಾತ್ರ ಶಾಶ್ವತವಾಗಿ ನಿಲ್ಲುವದು.


“ಆದರೆ ನೀವು ಒಂದು ಊರಿಗೆ ಹೋದಾಗ, ಅಲ್ಲಿಯ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ನೀವು ಆ ಊರಿನ ಬೀದಿಗಳಿಗೆ ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು