ಲೂಕ 11:1 - ಪರಿಶುದ್ದ ಬೈಬಲ್1 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥಿಸುತ್ತಿದ್ದನು. ಯೇಸು ಪ್ರಾರ್ಥನೆ ಮಾಡಿ ಮುಗಿಸಿದಾಗ, ಆತನ ಶಿಷ್ಯರಲ್ಲೊಬ್ಬನು, “ಪ್ರಭುವೇ, ಯೋಹಾನನು ತನ್ನ ಶಿಷ್ಯರಿಗೆ ಪ್ರಾರ್ಥಿಸುವ ವಿಧಾನವನ್ನು ಕಲಿಸಿದಂತೆ, ದಯಮಾಡಿ ನಮಗೂ ಪ್ರಾರ್ಥಿಸುವ ವಿಧಾನವನ್ನು ಹೇಳಿಕೊಡು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು. “ಪ್ರಭುವೇ, ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ,” ಎಂದನು. ಅದಕ್ಕೆ ಯೇಸು ಇಂತೆಂದರು, “ನೀವು ಹೀಗೆ ಪ್ರಾರ್ಥನೆಮಾಡಬೇಕು: ತಂದೆಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಸ್ವಾಮೀ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆಮಾಡುವದನ್ನು ಕಲಿಸು ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಎಕ್ ದಿಸ್ ಜೆಜು ಎಕ್ ಜಾಗ್ಯಾರ್ ಮಾಗ್ನಿ ಕರುಕ್ ಲಾಗಲ್ಲೊ. ತೆಚಿ ಮಾಗ್ನಿ ಕರುನ್ ಹೊಲ್ಲ್ಯಾ ಮಾನಾ, ತೆಚ್ಯಾ ಶಿಸಾನಿತ್ಲೊ ಎಕ್ಲೊ “ಗುರುಜಿ, ಜುವಾಂವಾಕ್ ಅಪ್ನಾಚ್ಯಾ ಶಿಸಾಕ್ನಿ ಶಿಕ್ವಲ್ಲ್ಯಾ ಸರ್ಕೆ ಅಮ್ಕಾಬಿ ಮಾಗ್ನಿ ಕರುಕ್ ಶಿಕ್ವು”, ಮನುನ್ ಸಾಂಗುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |
ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.