Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:10 - ಪರಿಶುದ್ದ ಬೈಬಲ್‌

10 ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಟ್ಟಿರಿ, ನಿಮಗೆ ತೆರೆಯುವದು. ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಇಚಾರ್ತಾತ್ ತೆನಿ ಘೆತ್ಯಾತ್,ಜೆ ಕೊನ್ ಹುಡಕ್ತಾ ತೆಕಾ ಗಾವ್ತಾ, ಅನಿ ಜೆ ಕೊನ್ ದಾರ್ ಬಡ್ವುತ್ಯಾತ್, ತೆಂಕಾ ದಾರ್ ಉಗಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:10
12 ತಿಳಿವುಗಳ ಹೋಲಿಕೆ  

ಮತ್ತು ನೀವು ಕೇಳಿಕೊಂಡಾಗ ನಿಮಗೆ ಅವು ಸಿಗಲಿಲ್ಲ. ಏಕೆಂದರೆ ನಿಮ್ಮ ಉದ್ದೇಶವು ಸರಿಯಾಗಿರಲಿಲ್ಲ. ನೀವು ಅವುಗಳನ್ನು ಕೇವಲ ನಿಮ್ಮ ಸ್ವಂತ ಸುಖಕ್ಕಾಗಿ ಕೇಳಿಕೊಂಡಿರಿ.


ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು.


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.


ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.


ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು.


ನಿಮ್ಮಲ್ಲಿ ಎಷ್ಟು ಜನರು ತಂದೆಗಳಾಗಿದ್ದೀರಿ? ನಿಮ್ಮ ಮಗನು ಮೀನನ್ನು ಕೇಳಿದರೆ, ನೀವು ಅವನಿಗೆ ಹಾವನ್ನು ಕೊಡುವಿರೋ? ಇಲ್ಲ! ನೀವು ಮೀನನ್ನೇ ಕೊಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು