Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:13 - ಪರಿಶುದ್ದ ಬೈಬಲ್‌

13 ನೀವು ಇತರ ಜನರಂತೆ ಕೆಟ್ಟವರಾಗಿದ್ದೀರಿ. ಆದರೆ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡುತ್ತೀರಿ. ಅದೇ ರೀತಿಯಲ್ಲಿ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ತನ್ನನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮನನ್ನು ಖಂಡಿತವಾಗಿ ಕೊಡುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಬುರ್ಶೆ ತುಮಿ, ತುಮ್ಕಾ ಗೊತ್ತ್ ಹಾಯ್,ಪೊರಾಕ್ನಿ ದಿವ್ಕ್ ಖಲೆ ಬರೆ ಮನುನ್ ಅನಿ ಖಲೆ ಪೊರಾಕ್ನಿ ದಿವ್ಚೆ ಮನುನ್, ತರ್, ಸರ್‍ಗಾ ವೈಲೊ ಪವಿತ್ರ್ ಬಾಬಾ, ಅಪ್ನಾಕ್ಡೆ ಮಾಗ್ತಲ್ಯಾಕ್ನಿ ಕವ್ಡ್ಯಾ ಮಾಪಾನ್ ಅಪ್ನಾಚೊ ಪವಿತ್ರ್ ಆತ್ಮೊ ದಿಯ್ಲ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:13
30 ತಿಳಿವುಗಳ ಹೋಲಿಕೆ  

ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.


ಯೇಸು ಆಕೆಗೆ, “ದೇವರು ಏನು ಕೊಡುತ್ತಾನೆಂಬುದು ನಿನಗೆ ಗೊತ್ತಿಲ್ಲ ಮತ್ತು ಕುಡಿಯಲು ನೀರನ್ನು ಕೇಳಿದ ನಾನು ಯಾರೆಂಬುದೂ ನಿನಗೆ ಗೊತ್ತಿಲ್ಲ. ನಿನಗೆ ಈ ಸಂಗತಿಗಳು ಗೊತ್ತಿದ್ದರೆ, ನೀನು ನನ್ನನ್ನು ಕೇಳಿಕೊಳ್ಳುತ್ತಿದ್ದೆ, ಮತ್ತು ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆ” ಎಂದನು.


ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.


ನೀವು ನನ್ನ ಗದರಿಕೆಗೆ ಕಿವಿಗೊಟ್ಟರೆ, ನನ್ನ ಮನಸ್ಸಿನಲ್ಲಿರುವುದನ್ನೆಲ್ಲ ತಿಳಿಸುವೆನು; ನನ್ನ ಆಲೋಚನೆಗಳನ್ನು ನಿಮಗೆ ಗೊತ್ತುಪಡಿಸುವೆನು.


ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.


ನಾನು ನನ್ನ ಆತ್ಮವನ್ನು ನಿಮ್ಮಲ್ಲಿರಿಸುವೆನು. ನೀವು ನನ್ನ ನಿಯಮಗಳಿಗೆ ವಿಧೇಯರಾಗುವಷ್ಟು ನಿಮ್ಮ ಮನಸ್ಸನ್ನು ಬದಲಾಯಿಸುವೆನು. ಆಗ ನೀವು ನನ್ನ ಆಜ್ಞೆಗಳನ್ನು ಜಾಗ್ರತೆಯಿಂದ ಪಾಲಿಸುವಿರಿ.


ಆದರೆ ನಾನು ಹೇಳುವುದೇನೆಂದರೆ, “ಒಬ್ಬ ತಾಯಿಯು ತನ್ನ ಮಗುವನ್ನು ಮರೆತಾಳೇ? ತಾನು ಹೆತ್ತ ಶಿಶುವನ್ನು ತಾಯಿಯು ಮರೆತುಬಿಡುವಳೇ? ಇಲ್ಲ. ಒಂದುವೇಳೆ ತಾಯಿ ತನ್ನ ಮಕ್ಕಳನ್ನು ಮರೆತಾಳು, ಆದರೆ ಯೆಹೋವನಾದ ನಾನು ನಿಮ್ಮನ್ನು ಮರೆಯುವದಿಲ್ಲ.


ಹೌದು, ಬೇರೆಯವರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸುತ್ತಾನೆ.


ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.


ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.


ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!


ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.


ಹೌದು, ನನ್ನಲ್ಲಿ ಅಂದರೆ ನನ್ನ ಪಾಪಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂಬುದು ನನಗೆ ಗೊತ್ತಿದೆ. ಒಳ್ಳೆಯ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಮನಸ್ಸಿದ್ದರೂ ಅವುಗಳನ್ನು ಕಾರ್ಯಗತಗೊಳಿಸಲು ನನಗೆ ಸಾಧ್ಯವಿಲ್ಲ.


ಒಬ್ಬನು ಪಾಪ ಮಾಡಿದನು, ಆ ಒಬ್ಬನ ದೆಸೆಯಿಂದ ಮರಣವು ಎಲ್ಲಾ ಜನರ ಮೇಲೆ ಆಳ್ವಿಕೆ ನಡೆಸಿತು. ಆದರೆ ಈಗ ಕೆಲವು ಜನರು ದೇವರ ಪೂರ್ಣ ಕೃಪೆಯನ್ನು ಮತ್ತು ನೀತಿವಂತರನ್ನಾಗಿ ಮಾಡುವ ಆತನ ಉಚಿತವಾದ ಮಹಾ ಕೊಡುಗೆಯನ್ನು ಸ್ವೀಕರಿಸಿಕೊಳ್ಳುವರು. ನಿಶ್ಚಯವಾಗಿಯು ಅವರು ಯೇಸು ಕ್ರಿಸ್ತನೆಂಬ ಆ ಒಬ್ಬ ಪುರುಷನ ಮೂಲಕ, ನಿಜವಾದ ಜೀವವನ್ನು ಹೊಂದಿಕೊಳ್ಳುವರು ಮತ್ತು ಆಳುವರು.


ಮೊದಲು ನಾವು ಸಹ ಅವಿವೇಕಿಗಳಾಗಿದ್ದೆವು. ನಾವು ವಿಧೇಯರಾಗಿರಲಿಲ್ಲ. ನಾವು ಮೋಸಹೋಗಿದ್ದೆವು. ಅನೇಕ ಬಗೆಯ ಆಸೆಗಳಿಗೆ ಮತ್ತು ಭೋಗಗಳಿಗೆ ದಾಸರಾಗಿದ್ದೆವು; ಕೆಟ್ಟದ್ದನ್ನು ಮಾಡುವವರೂ ಹೊಟ್ಟೆಕಿಚ್ಚುಳ್ಳವರೂ ಆಗಿದ್ದೆವು. ಜನರು ನಮ್ಮನ್ನು ದ್ವೇಷಿಸುತ್ತಿದ್ದರು. ನಾವು ಒಬ್ಬರನ್ನೊಬ್ಬರು ದ್ವೇಷಿಸುತ್ತಿದ್ದೆವು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ನಿಮ್ಮ ಮಗನು ಮೊಟ್ಟೆಯನ್ನು ಕೇಳಿದರೆ, ನೀವು ಅವನಿಗೆ ಚೇಳನ್ನು ಕೊಡುವಿರೋ? ಇಲ್ಲ!


ದೇವಜನರು ದೇವರಿಗೆ ಹಗಲಿರುಳು ಮೊರೆಯಿಡಬೇಕು. ದೇವರು ತನ್ನ ಜನರಿಗೆ ಸರಿಯಾದದ್ದನ್ನೇ ಯಾವಾಗಲೂ ಕೊಡುತ್ತಾನೆ. ತನ್ನ ಜನರಿಗೆ ಉತ್ತರ ಕೊಡುವುದರಲ್ಲಿ ದೇವರು ತಡಮಾಡುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು