ಲೂಕ 11:19 - ಪರಿಶುದ್ದ ಬೈಬಲ್19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾಗಿದ್ದರೆ, ನಿಮ್ಮ ಜನರು ದೆವ್ವಗಳನ್ನು ಯಾವ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನು ತಪ್ಪಿತಸ್ಥರೆಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜರ್ ಮಿಯಾ ಬೆಎಲ್ಜೆಬುಲಾಚ್ಯಾ ತಾಕ್ತಿನ್ ಗಿರೆ ಸೊಡ್ಸುತಾ ಹೊಲ್ಯಾರ್, ತುಮ್ಚೆ ವಾಂಗ್ಡಿ ಕಸ್ಲ್ಯಾ ತಾಕ್ತಿನ್ ಗಿರೆ ಕಾಡ್ತ್ಯಾತ್. ತುಮ್ಚೆ ವಾಂಗ್ಡಿಚ್ ತುಮಿ ಚುಕ್ ಕರುಕ್ ಲಾಗ್ಲ್ಯಾಶಿ ಮನುನ್ ದಾಕ್ವುನ್ ದಿತ್ಯಾತ್”. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಕೆಲವು ಯೆಹೂದ್ಯರು ಸಹ ಊರೂರುಗಳಿಗೆ ಸಂಚರಿಸುತ್ತಾ ದೆವ್ವದಿಂದ ಪೀಡಿತರಾಗಿದ್ದ ಜನರೊಳಗಿಂದ ದೆವ್ವಗಳನ್ನು ಯೇಸುವಿನ ಹೆಸರಿನ ಮೂಲಕ ಹೊರಡಿಸುತ್ತಿದ್ದರು. ಸ್ಕೇವ ಎಂಬವನ ಏಳು ಮಂದಿ ಗಂಡುಮಕ್ಕಳೂ ಹೀಗೇ ಮಾಡುತ್ತಿದ್ದರು. (ಸ್ಕೇವನು ಪ್ರಧಾನಯಾಜಕನಾಗಿದ್ದನು.) ಅವರೆಲ್ಲರೂ, “ಪೌಲನು ಯಾವ ಯೇಸುವಿನ ಬಗ್ಗೆ ಹೇಳುತ್ತಿದ್ದಾನೋ ಆ ಯೇಸುವಿನ ಹೆಸರಿನಿಂದಲೇ ನೀನು ಹೊರಗೆ ಬರಬೇಕೆಂದು ನಾವು ಆಜ್ಞಾಪಿಸುತ್ತೇವೆ” ಎಂದು ಹೇಳುತ್ತಿದ್ದರು.