ಲೂಕ 11:2 - ಪರಿಶುದ್ದ ಬೈಬಲ್2 ಯೇಸು ಅವರಿಗೆ ಹೀಗೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ‘ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕಾತನು - ನೀವು ಪ್ರಾರ್ಥಿಸುವಾಗ - ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜೆಜುನ್ ತೆಂಕಾ “ತುಮಿ ಮಾಗ್ನಿ ಕರ್‍ತಾನಾ ಅಶೆ ಮನಾ, ಬಾಬಾ, ತುಜೆ ಪವಿತ್ರ್ ನಾವ್ ಲೈ ಮರ್‍ಯಾದಿಚೆ ಹೊಂವ್ದಿ; ತುಜೆ ರಾಜ್ ಯೆಂವ್ದಿ, ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.