22 ಆದರೆ ಅವನಿಗಿಂತಲೂ ಬಲಿಷ್ಠನಾದ ಮತ್ತೊಬ್ಬನು ಬಂದು ಅವನನ್ನು ಸೋಲಿಸಿದರೆ, ಮೊದಲನೆಯ ಬಲಿಷ್ಠನು ತನ್ನ ಮನೆಯನ್ನು ಸುರಕ್ಷಿತವಾಗಿಡುವುದಕ್ಕಾಗಿ ಅವಲಂಬಿಸಿಕೊಂಡಿದ್ದ ಆಯುಧಗಳನ್ನೆಲ್ಲಾ ಆ ಮತ್ತೊಬ್ಬ ಬಲಿಷ್ಠನು ತೆಗೆದುಕೊಂಡು ಹೋಗುವನು. ಬಳಿಕ ಆ ಮತ್ತೊಬ್ಬ ಬಲಿಷ್ಠನು ಆ ಮನುಷ್ಯನ ವಸ್ತುಗಳನ್ನು ತನಗೆ ಇಷ್ಟಬಂದ ಹಾಗೆ ಮಾಡುವನು.
ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.
ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.
ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.
ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ, ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.
“‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು.