ಲೂಕ 11:26 - ಪರಿಶುದ್ದ ಬೈಬಲ್26 ಆಗ ಹೊರಟುಹೋಗಿ ತನಗಿಂತಲೂ ಹೆಚ್ಚು ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಬಳಿಕ ಆ ದೆವ್ವಗಳೆಲ್ಲಾ ಆ ಮನುಷ್ಯನೊಳಗೆ ಹೋಗಿ ಅಲ್ಲೇ ವಾಸಿಸುತ್ತವೆ. ಆಗ ಆ ವ್ಯಕ್ತಿಯು ಮೊದಲಿಗಿಂತಲೂ ಹೆಚ್ಚಿನ ಸಂಕಟಕ್ಕೆ ಒಳಗಾಗುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರಕೊಂಡು ಬರುವದು; ಅವು ಒಳಹೊಕ್ಕು ಅಲ್ಲಿ ವಾಸಮಾಡುವವು; ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ತೊ ಗಿರೊ ಪರ್ತುನ್ ಫಾಟಿ ಜಾತಾ, ಅನಿ ಅಪ್ನಾಚ್ಯಾನ್ಕಿ ಬುರ್ಶ್ಯಾ ಸಾತ್ ಗಿರ್‍ಯಾಕ್ನಿ ಘೆವ್ನ್ ಯೆತಾ, ಮಾನಾ ತೆನಿ ಸಗ್ಳೆ ಜಾನಾ, ಥೈ ಯೆವ್ನ್ ರ್‍ಹಾತ್ಯಾತ್. ಅಶೆ ಸಗ್ಳೆ ಹೊವ್ನ್ ಸರಲ್ಲ್ಯಾ ತನ್ನಾ, ತೊ ಮಾನುಸ್ ಅದ್ದಿ ಹೊತ್ತ್ಯಾನ್ಕಿ ಬುರ್ಶ್ಯಾ ಪರಿಸ್ತಿತಿಕ್ ಯೆವ್ನ್ ಪಾವ್ತಾ, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.