Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:28 - ಪರಿಶುದ್ದ ಬೈಬಲ್‌

28 ಆದರೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ಭಾಗ್ಯವಂತರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಜೆಜುನ್ ತನ್ನಾ ತಿಕಾ “ದೆವಾಚ್ಯಾ ಗೊಸ್ಟಿಯಾ ಆಯ್ಕುನ್, ತೆಚೆ ಸರ್ಕೆ ಚಲ್ತಲ್ಯಾಂಚೆ ನಸಿಬ್ ತಿಚ್ಯಾನ್ಕಿ ಬರೆ”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:28
16 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ನೀವು ಈ ಸಂಗತಿಗಳನ್ನು ತಿಳಿದುಕೊಂಡು ಇವುಗಳನ್ನು ಕೈಕೊಂಡು ನಡೆದರೆ ಸಂತೋಷದಿಂದಿರುವಿರಿ.


ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡ ಜನರೇ ಧನ್ಯರು. ಅವರು ಜೀವವೃಕ್ಷದ ಹಣ್ಣನ್ನು ತಿನ್ನಲು ಹಕ್ಕುಳ್ಳವರಾಗಿದ್ದಾರೆ. ಅವರು ಬಾಗಿಲುಗಳ ಮೂಲಕ ನಗರದೊಳಕ್ಕೆ ಹೋಗಬಲ್ಲರು.


“ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ! ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರಾಗಿದ್ದಾರೆ.


ಆಜ್ಞೆಗಳಿಗೆ ವಿಧೇಯನಾಗುವವನು ತನ್ನ ಪ್ರಾಣವನ್ನು ಸಂರಕ್ಷಿಸಿಕೊಳ್ಳುವನು. ಆದರೆ ತನ್ನ ನಡತೆಯ ಬಗ್ಗೆ ನಿರ್ಲಕ್ಷ್ಯದಿಂದಿರುವವನು ಸಾವಿಗೀಡಾಗುವನು.


ದೇವರಿಂದ ಬಂದ ಈ ಸಂದೇಶದ ವಾಕ್ಯಗಳನ್ನು ಓದುವವರೂ ಈ ಸಂದೇಶವನ್ನು ಕೇಳಿ ಅದನ್ನು ಕೈಕೊಂಡು ನಡೆಯುವವರೂ ಭಾಗ್ಯವಂತರಾಗಿದ್ದಾರೆ. ಏಕೆಂದರೆ ನೆರವೇರುವ ಕಾಲವು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು