31 “ನ್ಯಾಯತೀರ್ಪಿನ ದಿನದಲ್ಲಿ ದಕ್ಷಿಣ ದೇಶದ ರಾಣಿಯು ಈ ಪೀಳಿಗೆಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು. ಏಕೆಂದರೆ ಆ ರಾಣಿಯು ಬಹುದೂರದಿಂದ ಸೊಲೊಮೋನನ ಜ್ಞಾನಬೋಧನೆಯನ್ನು ಕೇಳಲು ಬಂದಳು. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಾನು ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ!
31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
31 “ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.
31 ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆಯಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಹೇಳುವಳು; ಆಕೆಯು ಸೊಲೊಮೋನನ ಜ್ಞಾನವನ್ನು ತಿಳುಕೊಳ್ಳುವದಕ್ಕೆ ಭೂವಿುಯ ಕಟ್ಟಕಡೆಯಿಂದ ಬಂದಳು; ಆದರೆ ಇಲ್ಲಿ ಸೊಲೊಮೋನನಿಗಿಂತಲೂ ಹೆಚ್ಚಿನವನಿದ್ದಾನೆ.
31 ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.
ಸೊಲೊಮೋನನ ಪ್ರಖ್ಯಾತಿಯನ್ನು ಶೆಬದ ರಾಣಿಯು ಕೇಳಿ ಅವನನ್ನು ಕಠಿಣವಾದ ಪ್ರಶ್ನೆಗಳಿಂದ ಪರೀಕ್ಷಿಸುವದಕ್ಕಾಗಿ ಜೆರುಸಲೇಮಿಗೆ ಬಂದಳು. ಆಕೆಯು ದೊಡ್ಡ ಪರಿವಾರದೊಂದಿಗೆ ಬಂದಳು. ಜೊತೆಗೆ ಒಂಟೆಗಳ ಮೇಲೆ ಸುಗಂಧದ್ರವ್ಯವನ್ನೂ ಅಪರಿಮಿತವಾದ ಬಂಗಾರವನ್ನೂ ವಜ್ರವೈಢೂರ್ಯಗಳನ್ನೂ ಹೇರಿಕೊಂಡು ಬಂದಳು. ಅಲ್ಲಿ ಆಕೆ ಸೊಲೊಮೋನನ ಸಂಗಡ ಮಾತನಾಡಿ ತನ್ನಲ್ಲಿದ್ದ ಎಷ್ಟೋ ಪ್ರಶ್ನೆಗಳನ್ನು ಕೇಳಿದಳು.
ಯೆಹೂದ್ಯರಾದ ನಿಮಗೆ ಲಿಖಿತ ಧರ್ಮಶಾಸ್ತ್ರವಿದೆ ಮತ್ತು ಸುನ್ನತಿಯಾಗಿದೆ. ಆದರೆ ನೀವು ಧರ್ಮಶಾಸ್ತ್ರವನ್ನು ಮೀರಿ ನಡೆಯುತ್ತೀರಿ. ಹೀಗಿರಲು, ದೇಹದಲ್ಲಿ ಸುನ್ನತಿಯನ್ನು ಹೊಂದಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುವ ಜನರು ನಿಮ್ಮನ್ನು ಅಪರಾಧಿಗಳೆಂದು ತೋರ್ಪಡಿಸುತ್ತಾರೆ.
ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
“ನ್ಯಾಯತೀರ್ಪಿನ ದಿನದಂದು ದಕ್ಷಿಣ ದೇಶದ ರಾಣಿಯು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ಎದ್ದುನಿಂತು ನಿಮ್ಮನ್ನು ತಪ್ಪಿತಸ್ಥರೆಂದು (ಅಪರಾಧಿಗಳು) ನಿರೂಪಿಸುವಳು. ಏಕೆಂದರೆ, ಆ ರಾಣಿಯು ಸೊಲೊಮೋನನ ಜ್ಞಾನದ ಬೋಧನೆಯನ್ನು ಕೇಳಲು ಬಹಳ ದೂರದಿಂದ ಬಂದಳು. ನಾನಾದರೋ ಸೊಲೊಮೋನನಿಗಿಂತಲೂ ಹೆಚ್ಚಿನವನಾಗಿದ್ದೇನೆ ಎಂದು ನಿಮಗೆ ಹೇಳುತ್ತೇನೆ.
ಕಣ್ಣಿಗೆ ಇನ್ನೂ ಕಾಣದಿದ್ದ ಸಂಗತಿಗಳ ಬಗ್ಗೆ ದೇವರು ನೋಹನನ್ನು ಎಚ್ಚರಿಸಿದನು. ನೋಹನು ದೇವರಲ್ಲಿ ನಂಬಿಕೆಯಿಟ್ಟಿದ್ದನು ಮತ್ತು ಭಕ್ತಿಯುಳ್ಳವನಾಗಿದ್ದನು. ಆದ್ದರಿಂದ ಅವನು ತನ್ನ ಕುಟುಂಬ ರಕ್ಷಣೆಗಾಗಿ ದೊಡ್ಡ ನಾವೆಯನ್ನು ಕಟ್ಟಿ, ಈ ಲೋಕದ ತಪ್ಪನ್ನು ತೋರ್ಪಡಿಸಿದನು. ಹೀಗೆ, ನಂಬಿಕೆಯ ಮೂಲಕ ನೀತಿವಂತರಾದ ಜನರಲ್ಲಿ ಅವನೂ ಒಬ್ಬನಾದನು.
“ನಿನಗೆ ವಿರುದ್ಧವಾಗಿ ಯುದ್ಧಮಾಡಲು ಜನರು ಆಯುಧಗಳನ್ನು ತಯಾರಿಸುವರು. ಆದರೆ ಆ ಆಯುಧಗಳು ನಿನ್ನನ್ನು ಸೋಲಿಸಲಾರವು. ಅವರು ನಿನಗೆ ವಿರುದ್ಧವಾಗಿ ಮಾತಾಡಿದರೂ ಆ ಮಾತುಗಳು ನಿನ್ನನ್ನು ತಪ್ಪಿತಸ್ಥಳೆಂದು ತೋರಿಸಲಾರವು. “ಯೆಹೋವನ ಸೇವಕರಿಗೆ ದೊರೆಯುವುದೇನು? ಅವರಿಗೆ ಆತನಿಂದಲೇ ಸುಫಲಗಳು ದೊರೆಯುತ್ತವೆ” ಎಂದು ಯೆಹೋವನು ಅನ್ನುತ್ತಾನೆ.