Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:33 - ಪರಿಶುದ್ದ ಬೈಬಲ್‌

33 “ದೀಪವನ್ನು ಹಚ್ಚಿ ಪಾತ್ರೆಯೊಳಗಾಗಲಿ ಬೇರೆ ಎಲ್ಲೇ ಆಗಲಿ ಅಡಗಿಸಿಡುವುದಿಲ್ಲ. ಒಳಗೆ ಬರುವವರಿಗೆ ಬೆಳಕು ಕಾಣಿಸಲೆಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಯಾರೂ ದೀಪವನ್ನು ಹಚ್ಚಿ ನೆಲಮಾಳಿಗೆಯಲ್ಲಾಗಲಿ, ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಯಾರೂ ದೀಪವನ್ನು ಹಚ್ಚಿ ಮರೆಯಾದ ಸ್ಥಳದಲ್ಲಾಗಲಿ ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ, ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಕೊನ್ಬಿ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ನಾ ತರ್ ನಿಜ್ತಲ್ಯಾ ಮಾಚೊಳಿಚ್ಯಾ ಬುಡಿ ಧಾಪುನ್ ಥಯ್ನಾ, ತೊ, ತೊ ದಿವೊ ವೈರ್ ದಿವೊ ಥವ್ತಲ್ಯಾ ಜಾಗ್ಯಾರ್ ಥವ್ತಾ. ಅಶೆ ಲೊಕಾ ಘರಾತ್ ಭುತ್ತುರ್ ಯೆಲ್ಲ್ಯಾ ತನ್ನಾ ತೆಂಕಾ ಉಜ್ವೊಡ್ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:33
7 ತಿಳಿವುಗಳ ಹೋಲಿಕೆ  

ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.


ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.


ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು