Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:41 - ಪರಿಶುದ್ದ ಬೈಬಲ್‌

41 ಆದ್ದರಿಂದ ಪಾತ್ರೆ ಮತ್ತು ಬಟ್ಟಲುಗಳ ಒಳಗಿರುವುದನ್ನು ಬಡವರಿಗೆ ದಾನಮಾಡಿರಿ. ಆಗ ನೀವು ಪೂರ್ಣಶುದ್ಧರಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹೇಗೂ ಒಳಗಿರುವಂಥದನ್ನು ದಾನಾಕೊಡಿರಿ; ಆಗ ಸಕಲವೂ ನಿಮಗೆ ಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತುಮ್ಚ್ಯಾ ವಾಟ್ಕ್ಯಾತ್ನಿ, ಅನಿ ಆಯ್ದಾನಾತ್ನಿ ಹೊತ್ತೆ, ಗರಿಬಾಕ್ನಿ ದಿವಾ, ಅನಿ ತುಮಿ ಪದ್ದತಿ ಪರ್‌ಕಾರ್ ಸಗ್ಳೆ ಪವಿತ್ರ್ ಹೊತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:41
37 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.


ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.


ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.


ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಆದರೆ ಆ ವಾಣಿಯು ಅವನಿಗೆ, “ದೇವರು ಇವುಗಳನ್ನು ಶುದ್ಧೀಕರಿಸಿದ್ದಾನೆ. ಇವುಗಳನ್ನು ‘ಅಪವಿತ್ರ’ವೆಂದು ಹೇಳಬೇಡ” ಎಂದು ಮತ್ತೆ ಹೇಳಿತು.


“ಈ ಲೋಕದಲ್ಲಿ ನೀವು ಹೊಂದಿರುವಂಥವುಗಳಿಂದ ದೇವರಿಗೆ ಸ್ನೇಹಿತರನ್ನು ಮಾಡಿಕೊಡಿರಿ. ನೀವು ಹೀಗೆ ಮಾಡಿದರೆ, ಈ ಲೋಕದವುಗಳು ನಿಮ್ಮ ಕೈಬಿಟ್ಟು ಹೋದಾಗ ನಿಮ್ಮನ್ನು ಶಾಶ್ವತವಾದ ಮನೆಗೆ ಸ್ವೀಕರಿಸಿಕೊಳ್ಳಲಾಗುವುದು.


ಆದ್ದರಿಂದ ರಾಜನೇ, ನನ್ನ ಬುದ್ಧಿವಾದವನ್ನು ದಯವಿಟ್ಟು ಒಪ್ಪಿಕೊ. ನೀನು ಪಾಪಕೃತ್ಯಗಳನ್ನು ಮಾಡಬೇಡ. ನೀತಿಯನ್ನು ಅನುಸರಿಸು; ಕೆಟ್ಟದ್ದನ್ನು ಮಾಡಬೇಡ. ಬಡಜನರಿಗೆ ಕರುಣೆಯನ್ನು ತೋರು. ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾಗುವುದು. ಇದೇ ನನ್ನ ಬುದ್ಧಿವಾದ” ಎಂದು ಅರಿಕೆ ಮಾಡಿದನು.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ನೀವು ಕೊಡಬೇಕೆಂದು ಕೊಟ್ಟರೆ ನಿಮ್ಮ ದಾನವು ಸ್ವೀಕೃತವಾಗುವುದು. ನಿಮ್ಮ ದಾನದ ಮೌಲ್ಯಮಾಪನವು ನೀವು ಏನನ್ನು ಹೊಂದಿದ್ದೀರಿ ಎಂಬುದರ ಮೇಲೆಯೇ ಹೊರತು ನೀವು ಏನನ್ನು ಹೊಂದಿಲ್ಲ ಎಂಬುದರ ಮೇಲೆ ಆಧಾರಗೊಂಡಿಲ್ಲ.


ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.


ಆಗ ಯೇಸು ಅವನಿಗೆ, “ನೀನು ಮಾಡಬೇಕಾದ ಇನ್ನೊಂದು ಕಾರ್ಯವಿದೆ. ನಿನ್ನ ಆಸ್ತಿಯನ್ನೆಲ್ಲಾ ಮಾರಿ ಅದರಿಂದ ಬಂದ ಹಣವನ್ನು ಬಡ ಜನರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ದೊರೆಯುವುದು. ನೀನಾದರೋ ಬಂದು ನನ್ನನ್ನು ಹಿಂಬಾಲಿಸು!” ಅಂದನು.


ಯಾವನಾದರೂ ನಿಮ್ಮಲ್ಲಿರುವ ಯಾವುದನ್ನಾದರೂ ಕೇಳಿದರೆ, ಅವನಿಗೆ ಕೊಡಿ. ನಿಮ್ಮಿಂದ ಸಾಲ ತೆಗೆದುಕೊಳ್ಳಬೇಕೆಂದು ಬಂದವನಿಗೆ ಕೊಡದಿರಬೇಡಿ.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಯಾವನು ಬಡಜನರನ್ನು ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ಬಡಜನರು ನಿಮ್ಮೊಂದಿಗೆ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


“ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ಆಹಾರವು ಒಬ್ಬ ಮನುಷ್ಯನ ಹೃದಯದೊಳಕ್ಕೆ ಹೋಗದೆ ಹೊಟ್ಟೆಯೊಳಕ್ಕೆ ಹೋಗುತ್ತದೆ. ಅನಂತರ ಅದು ಅಲ್ಲಿಂದ ಹೊರಬರುತ್ತದೆ” ಎಂದು ಹೇಳಿದನು. (ಹೀಗೆ ತಿನ್ನತಕ್ಕ ಯಾವ ಆಹಾರವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದನು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು